ADVERTISEMENT

ರಸ್ತೆ ದುರಸ್ತಿಗೆ ಆಗ್ರಹಿಸಿ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 15 ಅಕ್ಟೋಬರ್ 2018, 9:38 IST
Last Updated 15 ಅಕ್ಟೋಬರ್ 2018, 9:38 IST
ರಸ್ತೆ ದುರಸ್ತಿಗೆ ಆಗ್ರಹಿಸಿ ನೀಲಿಜಿನ್ ರಸ್ತೆ ವ್ಯಾಪಾರಿಗಳು ಹುಬ್ಬಳ್ಳಿಯಲ್ಲಿ ಪ್ರತಿಭಟನೆ ನಡೆಸಿದರು. ಪ್ರಜಾವಾಣಿ ಚಿತ್ರ
ರಸ್ತೆ ದುರಸ್ತಿಗೆ ಆಗ್ರಹಿಸಿ ನೀಲಿಜಿನ್ ರಸ್ತೆ ವ್ಯಾಪಾರಿಗಳು ಹುಬ್ಬಳ್ಳಿಯಲ್ಲಿ ಪ್ರತಿಭಟನೆ ನಡೆಸಿದರು. ಪ್ರಜಾವಾಣಿ ಚಿತ್ರ   

ಹುಬ್ಬಳ್ಳಿ:ರಸ್ತೆ ದುರಸ್ತಿ ಹಾಗೂ ದೂಳಿನ ಸಮಸ್ಯೆ ನಿವಾರಿಸುವಂತೆ ಆಗ್ರಹಿಸಿ ಇಲ್ಲಿನ ನೀಲಿಜಿನ್ ರಸ್ತೆಯ ವ್ಯಾಪಾರಿಗಳು ಸೋಮವಾರ ರಸ್ತೆ ಬಂದ್ ಮಾಡಿ ಪ್ರತಿಭಟನೆ ನಡೆಸಿದರು.

ನೀಲಿಜಿನ್ ರಸ್ತೆಯ ಎರಡೂ ಬದಿ ನೂರಾರು ಅಂಗಡಿಗಳಿವೆ. ಆದರೆ ಈ ರಸ್ತೆ ತೀರ ಹದಗೆಟ್ಟಿದ್ದು, ದೂಳು ಏಳುತ್ತಿದೆ. ಪರಿಣಾಮ ಗ್ರಾಹಕರು ಈ ರಸ್ತೆ ಗೆ ಬರಲು ಹಿಂದೇಟು ಹಾಕುತ್ತಿದ್ದಾರೆ. ವ್ಯವಹಾರದ ಮೇಲೆ ಇದು ವ್ಯತಿರಿಕ್ತ ಪರಿಣಾಮ ಬೀರಿದ್ದು, ನಷ್ಟ ಅನುಭವಿಸುವಂತಾಗಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

ಸದಾ ದೂಳು ತುಂಬಿರುವುದರಿಂದ ವ್ಯಾಪಾರಿಗಳ ಆರೋಗ್ಯದ ಮೇಲೆ ದುಷ್ಪರಿಣಾಮ ಉಂಟಾಗುತ್ತಿದೆ. ಬೆಳಿಗ್ಗೆಯಿಂದ ಸಂಜೆ ವರೆಗೆ ದೂಳು ಕುಡಿಯುವಂತಾಗಿದೆ ಎಂದರು.

ADVERTISEMENT

ರಸ್ತೆಯನ್ನು ದಯರಸ್ತಿ ಮಾಡಬೇಕು, ಪಾರ್ಕಿಂಗ್ ಗೆ ಸಹ ಸೂಕ್ತ ವ್ಯವಸ್ಥೆ ಮಾಡಬೇಕು. ಇಲ್ಲವಾದರೆ ಹೋರಾಟ ತೀವ್ರಗೊಳಿಸಬೇಕಾಗುತ್ತದೆ ಎಂದು ಅವರು ಎಚ್ಚರಿಕೆ ನೀಡಿದರು.

ರಸ್ತೆ ಬಂದ್ ಮಾಡಿಸ ಪರಿಣಾಮ ವಾಹನ ಸಂಚಾರಕ್ಕೆ ಕೆಲ ಕಾಲ ಅಡಚಣೆ ಉಂಟಾಗಿತ್ತು. ವರ್ತಕರೊಂದಿಗೆ ಸಭೆ ನಡೆಸಿದ ಪೊಲೀಸರು ಸಮಸ್ಯೆ ಬಗೆಹರಿಸುವ ಭರವಸೆ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.