ADVERTISEMENT

1,200 ಹುದ್ದೆ ಭರ್ತಿಗೆ ಅಧಿಸೂಚನೆ ಶೀಘ್ರ: ಅಶ್ವತ್ಥನಾರಾಯಣ

ಅತಿಥಿ ಉಪನ್ಯಾಸಕರ ಸಮಾವೇಶ: ಉನ್ನತ ಶಿಕ್ಷಣ ಸಚಿವ

​ಪ್ರಜಾವಾಣಿ ವಾರ್ತೆ
Published 30 ನವೆಂಬರ್ 2022, 17:42 IST
Last Updated 30 ನವೆಂಬರ್ 2022, 17:42 IST
ಧಾರವಾಡದ ಕರ್ನಾಟಕ ಕಾಲೇಜು ಮೈದಾನದಲ್ಲಿ ಬುಧವಾರ ನಡೆದ ಕರ್ನಾಟಕ ರಾಜ್ಯ ಪ್ರಥಮ ದರ್ಜೆ ಕಾಲೆಜುಗಳ ಅತಿಥಿ ಉಪನ್ಯಾಸಕರ ರಾಜ್ಯ ಮಟ್ಟದ ಸಮಾವೇಶದಲ್ಲಿ ಡಾ. ಸಿ.ಎನ್.ಅಶ್ವತ್ಥನಾರಾಯಣ ಮಾತನಾಡಿದರು. ಪೀಟರ್ ವಿನೋದಚಂದ್, ಡಾ. ಕುಬೇರಪ್ಪ, ಅರುಣ ಶಹಾಪುರ, ಕೃಷ್ಣಮೂರ್ತಿ ಬಿಳಿಗೆರೆ, ರಘು ಅಕ್ಮಂಚಿ, ಹನುಮಂತಗೌಡ ಕಲ್ಮನಿ ಇದ್ದಾರೆ.
ಧಾರವಾಡದ ಕರ್ನಾಟಕ ಕಾಲೇಜು ಮೈದಾನದಲ್ಲಿ ಬುಧವಾರ ನಡೆದ ಕರ್ನಾಟಕ ರಾಜ್ಯ ಪ್ರಥಮ ದರ್ಜೆ ಕಾಲೆಜುಗಳ ಅತಿಥಿ ಉಪನ್ಯಾಸಕರ ರಾಜ್ಯ ಮಟ್ಟದ ಸಮಾವೇಶದಲ್ಲಿ ಡಾ. ಸಿ.ಎನ್.ಅಶ್ವತ್ಥನಾರಾಯಣ ಮಾತನಾಡಿದರು. ಪೀಟರ್ ವಿನೋದಚಂದ್, ಡಾ. ಕುಬೇರಪ್ಪ, ಅರುಣ ಶಹಾಪುರ, ಕೃಷ್ಣಮೂರ್ತಿ ಬಿಳಿಗೆರೆ, ರಘು ಅಕ್ಮಂಚಿ, ಹನುಮಂತಗೌಡ ಕಲ್ಮನಿ ಇದ್ದಾರೆ.   

ಧಾರವಾಡ: ‘ಉನ್ನತ ಶಿಕ್ಷಣ ಇಲಾಖೆಯಲ್ಲಿ ಖಾಲಿ ಇರುವ 1,500 ಹುದ್ದೆಗಳ ಪೈಕಿ 1,200 ಹುದ್ದೆ ಭರ್ತಿಗೆ ಪ್ರಕ್ರಿಯೆ ನಡೆಯುತ್ತಿದೆ. ಶೀಘ್ರದಲ್ಲೇ ಅಧಿಸೂಚನೆ ಹೊರಡಿಸಲಾಗುವುದು’ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ತಿಳಿಸಿದರು.

ರಾಜ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರ ಸಂಘ ಬುಧವಾರ ಹಮ್ಮಿಕೊಂಡಿದ್ದ ರಾಜ್ಯಮಟ್ಟದ ಸಮಾವೇಶದಲ್ಲಿ ಅವರು ಮಾತನಾಡಿದರು.

‘ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಎರಡು ವರ್ಷಗಳಿಗೊಮ್ಮೆ ಭರ್ತಿ ಮಾಡಿಕೊಳ್ಳುವ ಪ್ರಕ್ರಿಯೆ ನಡೆದಿದೆ. ರಾಜ್ಯದ ಸರ್ಕಾರಿ ಕಾಲೇಜುಗಳಲ್ಲಿ 6,500 ಉಪನ್ಯಾಸಕರು ಇದ್ದಾರೆ. ಹಾಗೆಯೇ 12,500 ಅತಿಥಿ ಉಪನ್ಯಾಸಕರಿದ್ದಾರೆ.ಅತಿಥಿ ಉಪನ್ಯಾಸಕರ ಬೇಡಿಕೆಗಳಲ್ಲಿ ಕೆಲವು ಈಡೇರಿಸಿದ್ದು, ಬಾಕಿ ಬೇಡಿಕೆಗಳನ್ನು ಮುಖ್ಯಮಂತ್ರಿ ಮತ್ತು ಅಧಿಕಾರಿಗಳೊಂದಿಗೆ ಚರ್ಚಿಸಿ ಈಡೇರಿಸಲಾಗುವುದು’ ಎಂದರು.

ADVERTISEMENT

‘ಪದವಿ ಪೂರ್ವ ಕಾಲೇಜುಗಳ ಫಲಿತಾಂಶ ಇನ್ನಷ್ಟು ಹೆಚ್ಚಿಸಬೇಕಿದೆ. ಆ ನಿಟ್ಟಿನಲ್ಲಿ ಅತಿಥಿ ಉಪನ್ಯಾಸಕರು ಕಾರ್ಯಕ್ಷಮತೆ ಹೆಚ್ಚಿಸಿಕೊಂಡು, ಭರವಸೆ ಮತ್ತು ವಿಶ್ವಾಸದಿಂದ ಕೆಲಸ ನಿರ್ವಹಿಸಬೇಕು’ ಎಂದು ಸಲಹೆ ನೀಡಿದರು.

ಕಾಂಗ್ರೆಸ್ ಮುಖಂಡ ಡಾ. ಕುಬೇರಪ್ಪ ಮಾತನಾಡಿ, ‘ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೆ ಅತಿಥಿ ಉಪನ್ಯಾಸಕರನ್ನು ಕಾಯಂಗೊಳಿಸುವುದು ಹಾಗೂ ಹಳೆ ಪಿಂಚಣಿ ಯೋಜನೆ ಜಾರಿಗೆ ತರುವ ಕುರಿತು ಪಕ್ಷದ ನಾಯಕರು ಲಿಖಿತ ಪತ್ರ ನೀಡಿದ್ದಾರೆ. ಒಂದೊಮ್ಮೆ ಅಷ್ಟರಲ್ಲಿ ಅಶ್ವತ್ಥನಾರಾಯಣ ಅವರೇ ಆ ಕೆಲಸ ಮಾಡಿದರೆ, ಕಾಂಗ್ರೆಸ್ ಪಕ್ಷದ ವಿಧಾನ ಪರಿಷತ್ ಸದಸ್ಯರು ವಿಧಾನಸಭೆಯಲ್ಲಿ ಅವರನ್ನು ಸನ್ಮಾನಿಸಲಿದ್ದಾರೆ’ ಎಂದು ಸವಾಲು ಹಾಕಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.