ADVERTISEMENT

ಸಾಹಿತಿ ಎಸ್.ಬಿ.ಜೋಗೂರ ನಿಧನ

​ಪ್ರಜಾವಾಣಿ ವಾರ್ತೆ
Published 28 ಆಗಸ್ಟ್ 2019, 19:04 IST
Last Updated 28 ಆಗಸ್ಟ್ 2019, 19:04 IST
ಡಾ. ಎಸ್.ಬಿ.ಜೋಗೂರ
ಡಾ. ಎಸ್.ಬಿ.ಜೋಗೂರ   

ಧಾರವಾಡ: ಸಾಹಿತಿ ಡಾ‌.ಎಸ್.ಬಿ. ಜೋಗೂರ (51) ಬುಧವಾರ ಸಂಜೆ ನಿಧನರಾದರು.

ಅನಾರೋಗ್ಯ ದಿಂದ ಬಳಲುತ್ತಿದ್ದ ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರಿಗೆ ಪತ್ನಿ, ಇಬ್ಬರು ಪುತ್ರರು ಇದ್ದಾರೆ.

ಜೋಗುರ ಅವರು ಅಧ್ಯಾಪಕರಾಗುವ ಮೊದಲು ಪತ್ರಕರ್ತರಾಗಿ ಕೆಲಸ ಮಾಡಿದ್ದರು.

ADVERTISEMENT

‘ಬಣ್ಣದ ಹನಿಗಳು’, ‘ನೀನ್ಯಾಕೋ ನಿನ್ನ ಹಂಗ್ಯಾಕೋ’, ‘ಇರದೇ ತೋರುವ ಬಗೆ’ ಸೇರಿದಂತೆ 70ಕ್ಕೂ ಹೆಚ್ಚು ಕೃತಿಗಳನ್ನು ಬರೆದಿದ್ದಾರೆ. ವಿಜಯಪುರ ಜಿಲ್ಲೆಯ ಸಿಂದಗಿಯವರಾದ ಅವರು ಹಲವು ವರ್ಷಗಳಿಂದ ಧಾರವಾಡದಲ್ಲಿ ನೆಲೆಸಿದ್ದರು.ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸಮಾಜಶಾಸ್ತ್ರ ಅಧ್ಯಾಪಕರಾಗಿ ಕಾರ್ಯನಿರ್ವಹಿಸುತ್ತಿದ್ದರು.

ಪ್ರಗತಿಪರ ಚಿಂತಕರಾಗಿದ್ದ ಅವರು ಹಲವು ಕ್ರಿಯಾಶೀಲ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದರು. ವಿದ್ಯಾರ್ಥಿಗಳ ಪಾಲಿನ ನೆಚ್ಚಿನ ಶಿಕ್ಷಕರಾಗಿದ್ದರು. ಗುರುವಾರ ಬೆಳಿಗ್ಗೆ 11 ಗಂಟೆಗೆ ಹೊಸ ಯಲ್ಲಾಪುರದ ರುದ್ರಭೂಮಿಯಲ್ಲಿ ಅಂತ್ಯಕ್ರಿಯೆ ನಡೆಯಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.