ADVERTISEMENT

ಕೋಲ್ಕತ್ತಾ–ಹುಬ್ಬಳ್ಳಿ ಮಧ್ಯೆ ವಿಶೇಷ ರೈಲು

​ಪ್ರಜಾವಾಣಿ ವಾರ್ತೆ
Published 28 ಮೇ 2023, 14:39 IST
Last Updated 28 ಮೇ 2023, 14:39 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಹುಬ್ಬಳ್ಳಿ: ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ತಗ್ಗಿಸಲು ಪೂರ್ವ ರೈಲ್ವೆಯು ಕೋಲ್ಕತ್ತಾ– ಹುಬ್ಬಳ್ಳಿ ನಡುವೆ ಏಕಮುಖ ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್(02253) ವಿಶೇಷ ರೈಲು ಓಡಿಸಲು ನಿರ್ಧರಿಸಿದೆ.

ಮೇ 29ರಂದು ಕೋಲ್ಕತ್ತಾದಿಂದ ಹೊರಟು, ಮೇ 31ರಂದು ಸಂಜೆ 4 ಗಂಟೆಗೆ ಹುಬ್ಬಳ್ಳಿ ರೈಲು ನಿಲ್ದಾಣ ತಲುಪಲಿದೆ. ಭದ್ರಾಖ್, ಭುವನೇಶ್ವರ, ವಿಜಯನಗರ, ವಿಶಾಖಪಟ್ಟಣಂ, ವಿಜಯವಾಡ, ಗುಡೂರು, ರೇಣಿಗುಂಟಾ, ಕಟಪಾಡಿ, ಜೋಲಾರಪೇಟೆ, ಬೆಂಗಳೂರು, ತುಮಕೂರು, ಅರಸೀಕೆರೆ ಹಾಗೂ ದಾವಣಗೆರೆಯಲ್ಲಿ ನಿಲುಗಡೆಯಾಗಲಿದೆ ಎಂದು ರೈಲ್ವೆ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT