ADVERTISEMENT

ಅಬ್ಬಯ್ಯಗೆ ಅವಕಾಶ; ನಿರ್ಧಾರ ಕೈ ಬಿಟ್ಟ ಕಾಂಗ್ರೆಸ್

​ಪ್ರಜಾವಾಣಿ ವಾರ್ತೆ
Published 26 ಸೆಪ್ಟೆಂಬರ್ 2022, 6:56 IST
Last Updated 26 ಸೆಪ್ಟೆಂಬರ್ 2022, 6:56 IST

ಹುಬ್ಬಳ್ಳಿ: ತಮ್ಮನ್ನು ವಿಶ್ವಾಸಕ್ಕೆ ಪಡೆಯದೆ ರಾಷ್ಟ್ರಪತಿ ಪೌರ ಸನ್ಮಾನ ಕಾರ್ಯಕ್ರಮ ನಡೆಸಲಾಗುತ್ತಿದೆ ಎಂದು ಕಾರ್ಯಕ್ರಮದಲ್ಲಿ ಭಾಗವಹಿಸದಿರಲು ನಿರ್ಧರಿಸಿದ್ದ ಪಾಲಿಕೆಯ ಕಾಂಗ್ರೆಸ್ ಸದಸ್ಯರು, ಇದೀಗ ಕಾಂಗ್ರೆಸ್ ಶಾಸಕ ಪ್ರಸಾದ ಅಬ್ಬಯ್ಯ ಅವರಿಗೆ ವೇದಿಕೆ ಮೇಲೆ ಅವಕಾಶ ನೀಡಿದ ಹಿನ್ನೆಲೆಯಲ್ಲಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ನಿರ್ಧರಿಸಿದ್ದಾರೆ.

ಈ ಕುರಿತು ಪ್ರಕಟಣೆ ನೀಡಿರುವ ಹುಧಾ ಮಹಾನಗರ ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಅಲ್ತಾಫ್ ಹಳ್ಳೂರು, ಹಾಗೂ ಗ್ರಾಮೀಣ ಘಟಕದ ಅಧ್ಯಕ್ಷ ಅನಿಲಕುಮಾರ ಪಾಟೀಲ ಜಂಟಿ ಪತ್ರಿಕಾ ಹೇಳಿಕೆ ನೀಡಿದ್ದಾರೆ.

'ಪಕ್ಷದ ವರಿಷ್ಠರ ಸಲಹೆಯ ಮೇರೆಗೆ ಹಾಗೂ ಪಕ್ಷದ ಸ್ಥಳೀಯ ಶಾಸಕರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಪೌರ ಸನ್ಮಾನ ಕಾರ್ಯಕ್ರಮದ ಗಣ್ಯರ ಪಟ್ಟಿಯಲ್ಲಿ ಅವಕಾಶ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಈ ಮೊದಲು ಪಕ್ಷದ ವತಿಯಿಂದ ಕಾರ್ಯಕ್ರಮದಲ್ಲಿ ಭಾಗವಹಿಸದೆ ಇರುವ ನಿರ್ಧಾರವನ್ನು ಹಿಂಪಡೆದಿದ್ದು, ಕಾರ್ಯಕ್ರಮದಲ್ಲಿ ಪಕ್ಷದ ಮುಖಂಡರು, ಕಾರ್ಯಕರ್ತರು ಭಾಗವಹಿಸಲಿದ್ದಾರೆ. ಮೇಯರ್ ಅವರ ಏಕಪಕ್ಷಿಯ ನಿರ್ಧಾರವನ್ನು ಕಾಂಗ್ರೆಸ್ ಖಂಡಿಸುತ್ತದೆ' ಎಂದು ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.