ADVERTISEMENT

ಸಿದ್ದರಾಮಯ್ಯಗೆ, ಭಯೋತ್ಪಾದಕರಿಗೆ ವ್ಯತ್ಯಾಸವಿಲ್ಲ: ಅರವಿಂದ ಬೆಲ್ಲದ

​ಪ್ರಜಾವಾಣಿ ವಾರ್ತೆ
Published 26 ಏಪ್ರಿಲ್ 2025, 11:54 IST
Last Updated 26 ಏಪ್ರಿಲ್ 2025, 11:54 IST
ಅರವಿಂದ ಬೆಲ್ಲದ
ಅರವಿಂದ ಬೆಲ್ಲದ   

ಹುಬ್ಬಳ್ಳಿ: ‘ಕಾಶ್ಮೀರದ ಪಹಲ್ಗಾಮ್‌ನಲ್ಲಿ ಧರ್ಮದ ಹೆಸರು ಕೇಳಿ ಭಯೋತ್ಪಾದಕರು ಗುಂಡು ಹೊಡೆದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಅವರ ಕೃತ್ಯ ಸಮರ್ಥಿಸಿಕೊಳ್ಳುತ್ತಿರುವುದನ್ನು ನೋಡಿದರೆ, ಭಯೋತ್ಪಾದಕರಿಗೆ ಅವರಿಗೆ ಯಾವ ವ್ಯತ್ಯಾಸವೂ ಇಲ್ಲ’ ಎಂದು ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕ ಅರವಿಂದ ಬೆಲ್ಲದ ಆಕ್ರೋಶ ವ್ಯಕ್ತಪಡಿಸಿದರು.  

ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ದೇಶದ ಮೇಲೆ ಪಾಕಿಸ್ತಾನ ಭಯೋತ್ಪಾದಕರು ದಾಳಿ ನಡೆಸಿದಾಗಲೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮುಸ್ಲಿಮರ ಪರವಾಗಿ ಮಾತನಾಡುತ್ತಿದ್ದಾರೆ. ದೇಶದ ಭದ್ರತೆ ವಿಷಯ ಬಂದಾಗ ಧರ್ಮ, ಜಾತಿಯ ಯಾವ ಗುಂಗೂ ಇರಬಾರದು. ಪಾಕಿಸ್ತಾನದ ವಿರುದ್ಧ ಯುದ್ಧ ನಡೆದರೆ ರಾಜ್ಯದ ಮುಸ್ಲಿಮರು ಏನೆಂದುಕೊಳ್ಳುತ್ತಾರೋ ಎಂದು ಅವರು ಬಾಲಿಶ ಹೇಳಿಕೆ ನೀಡುತ್ತಿದ್ದಾರೆ. ವೋಟ್‌ ಬ್ಯಾಂಕ್‌ ರಾಜಕಾರಣಕ್ಕಾಗಿ ಕ್ಷುಲ್ಲಕ ಹೇಳಿಕೆ ನೀಡುವುದು ಸರಿಯಲ್ಲ’ ಎಂದು ಆಕ್ಷೇಪ ವ್ಯಕ್ತಪಡಿಸಿದರು.

‘ದೇಶದ ಭದ್ರತೆ ದೃಷ್ಟಿಯಿಂದ ಪಾಕಿಸ್ತಾನವನ್ನು ಮಟ್ಟ ಹಾಕುವ ಕೆಲಸ ಮಾಡಬೇಕಿದೆ. ಆ ನಿಟ್ಟಿನಲ್ಲಿ ಕೇಂದ್ರ ಬಿಜೆಪಿ ಸರ್ಕಾರ ಸಮರ್ಥವಾಗಿದೆ. ಕೇಂದ್ರದಲ್ಲಿ ಕಾಂಗ್ರೆಸ್‌ ಆಡಳಿತವಿದ್ದಾಗ ಕಾಶ್ಮೀರದಲ್ಲಿ ಯಾವ ಪರಿಸ್ಥಿತಿಯಿತ್ತು, ಬಿಜೆಪಿ ಆಡಳಿತವಿದ್ದಾಗ ಹೇಗಿದೆ ಎನ್ನುವುದು ಎಲ್ಲರಿಗೂ ತಿಳಿದಿದೆ. ಪಾಕಿಸ್ತಾನದ ವಿರುದ್ಧ ಕೈಗೊಳ್ಳುವ ನಿರ್ಧಾರಕ್ಕೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಸಂಪೂರ್ಣ ಬೆಂಬಲ ನೀಡುವುದಾಗಿ ಹೇಳಿದ್ದಾರೆ. ಆದರೆ, ಅವರದ್ದೇ ಪಕ್ಷದ ಸಚಿವ ಸಂತೋಷ ಲಾಡ್‌ ಅದರ ವಿರುದ್ಧ ಮಾತನಾಡುತ್ತಿರುವುದು ಹಾಸ್ಯಾಸ್ಪದ’ ಎಂದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.