ಹುಬ್ಬಳ್ಳಿ: ಇಲ್ಲಿನ ಹೆಗ್ಗೇರಿಯ ಆಯುರ್ವೇದ ಮಹಾವಿದ್ಯಾಲಯದಲ್ಲಿ ಶಲ್ಯತಂತ್ರ ವಿಭಾಗ ಹಾಗೂ ರಾಷ್ಟ್ರೀಯ ಪಂಚಗವ್ಯ ಪ್ರತಿಷ್ಠಾನ ಸಹಯೋಗದಲ್ಲಿ ಕ್ಯಾನ್ಸರ್ ರೋಗಿಗಳಿಗೆ ಪಂಚಗವ್ಯ ಔಷಧ ನೀಡುವ ವಿಶೇಷ ಶಿಬಿರವನ್ನು ಜುಲೈ 31ರಂದು ಬೆಳಿಗ್ಗೆ 10ರಿಂದ ಸಂಜೆ 4ರವರೆಗೂ ಆಯೋಜಿಸಲಾಗಿದೆ.
‘ಈ ಔಷಧ ಪರಿಣಾಮಕಾರಿ, ಅತ್ಯಂತ ಸುರಕ್ಷಿತವಾಗಿದೆ ಮತ್ತು ಯಾವುದೇ ಅಡ್ಡ ಪರಿಣಾಮಗಳಿಲ್ಲ. ಪಂಚಗವ್ಯ ಔಷಧ ಪರಿಣಿತರಾದ ಡಾ.ಡಿ.ಪಿ.ರಮೇಶ ಅವರು ರೋಗಿಗಳನ್ನು ಪರೀಕ್ಷಿಸಿ ಔಷಧ ನೀಡುವರು’ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಮಾಹಿತಿಗೆ 89711 76311, 89518 71131 ಸಂಖ್ಯೆ ಸಂಪರ್ಕಿಸಬಹುದು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.