
ಪ್ರಜಾವಾಣಿ ವಾರ್ತೆ
ಹುಬ್ಬಳ್ಳಿ: ‘ಲಿಂಗಾಯತರ ಮೇಲಿನ ದೌರ್ಜನ್ಯ ದಿನ’ವೆಂದು ಕಪ್ಪುಬಟ್ಟೆ ಕಟ್ಟಿಕೊಂಡು ಡಿ. 10ರಂದು ಬೆಳಗಾವಿಯಲ್ಲಿ ಮೌನ ಪ್ರತಿಭಟನೆ ಮಾಡಲಾಗುವುದು’ ಎಂದು ಕೂಡಲಸಂಗಮ ಲಿಂಗಾಯತ ಪಂಚಮಸಾಲಿ ಪೀಠದ ಬಸವ ಜಯಮೃತ್ಯುಂಜಯ ಸ್ವಾಮೀಜಿ ಹೇಳಿದರು.
‘ಕಳೆದ ವರ್ಷ ಬೆಳಗಾವಿಯಲ್ಲಿ ಮೀಸಲಾತಿಗಾಗಿ ಹೋರಾಟ ನಡೆಸುತ್ತಿದ್ದ ಲಿಂಗಾಯತ ಪಂಚಮಸಾಲಿ ಸಮಾಜದವರ ಮೇಲೆ ಪೊಲೀಸರಿಂದ ಲಾಠಿ ಪ್ರಹಾರ ನಡೆಸಿ, ರಾಜ್ಯ ಸರ್ಕಾರ ದೌರ್ಜನ್ಯ ಎಸಗಿತ್ತು’ ಎಂದೂ ಸೋಮವಾರ ಸುದ್ದಿಗಾರರಿಗೆ ತಿಳಿಸಿದರು.
‘ಈ ಪ್ರತಿಭಟನೆ ಶಕ್ತಿ ಪ್ರದರ್ಶನಕ್ಕೆ ಅಲ್ಲ. ಪಂಚಮಸಾಲಿ ಹೋರಾಟಕ್ಕೆ ನೈತಿಕ ಬಲ ತುಂಬಲು ಮಾಡಲಾಗುತ್ತಿದ್ದು, 10 ಸಾವಿರ ಜನ ಸೇರುವ ನಿರೀಕ್ಷೆ ಇದೆ’ ಎಂದು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.