ADVERTISEMENT

ಅಂಚಟಗೇರಿಯಲ್ಲಿ ₹228 ಕೋಟಿಯಲ್ಲಿ ಪಾರ್ಕ್‌

ಟರ್ಮಿನಲ್‌ ನಿರ್ಮಾಣಕ್ಕೆ ಸರ್ಕಾರಕ್ಕೆ ಪ್ರಸ್ತಾವ: ವೀರಯ್ಯ

​ಪ್ರಜಾವಾಣಿ ವಾರ್ತೆ
Published 16 ಜನವರಿ 2021, 14:52 IST
Last Updated 16 ಜನವರಿ 2021, 14:52 IST
ಹುಬ್ಬಳ್ಳಿ ತಾಲ್ಲೂಕಿನ ಅಂಚಟಗೇರಿಯಲ್ಲಿ ಶನಿವಾರ  ಟ್ರಕ್ ಟರ್ಮಿನಲ್ ನಿರ್ಮಿಸಲು ಮೀಸಲಿರುವ ಜಾಗವನ್ನು ಡಿ.ದೇವರಾಜ ಅರಸು ಟ್ರಕ್ ಟರ್ಮಿನಲ್ ನಿಗಮದ ಅಧ್ಯಕ್ಷ ಡಿ.ಎಸ್.ವೀರಯ್ಯ ಪರಿಶೀಲಿಸಿದರು
ಹುಬ್ಬಳ್ಳಿ ತಾಲ್ಲೂಕಿನ ಅಂಚಟಗೇರಿಯಲ್ಲಿ ಶನಿವಾರ  ಟ್ರಕ್ ಟರ್ಮಿನಲ್ ನಿರ್ಮಿಸಲು ಮೀಸಲಿರುವ ಜಾಗವನ್ನು ಡಿ.ದೇವರಾಜ ಅರಸು ಟ್ರಕ್ ಟರ್ಮಿನಲ್ ನಿಗಮದ ಅಧ್ಯಕ್ಷ ಡಿ.ಎಸ್.ವೀರಯ್ಯ ಪರಿಶೀಲಿಸಿದರು   

ಹುಬ್ಬಳ್ಳಿ: ಹುಬ್ಬಳ್ಳಿ, ಬೆಂಗಳೂರು, ಮೈಸೂರಿನಲ್ಲಿಸಾರ್ವಜನಿಕ ಹಾಗೂ ಖಾಸಗಿ ಸಹಭಾಗಿತ್ವದಲ್ಲಿ ಟ್ರಕ್ ಟರ್ಮಿನಲ್ ನಿರ್ಮಿಸಲು ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಲಾಗುವುದು. ಇಲ್ಲಿನ ಹೊರವಲಯದಅಂಚಟಗೇರಿಯಲ್ಲಿ ₹228 ಕೋಟಿ ವೆಚ್ಚದಲ್ಲಿ ಲಾಜಿಸ್ಟಿಕ್ ಪಾರ್ಕ್‌ನಿರ್ಮಿಸಲು ಯೋಜನೆ ರೂಪಿಸಲಾಗಿದೆ ಎಂದು ಡಿ.ದೇವರಾಜ ಅರಸು ಟ್ರಕ್ ಟರ್ಮಿನಲ್ ನಿಗಮದ ಅಧ್ಯಕ್ಷ ಡಿ.ಎಸ್.ವೀರಯ್ಯ ಹೇಳಿದರು.

ಅಂಚಟಗೇರಿಯಲ್ಲಿ ಉದ್ದೇಶಿತ ಟ್ರಕ್ ಟರ್ಮಿನಲ್ ಪರಿಶೀಲಿಸಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ‘ಪ್ರತಿ ಜಿಲ್ಲೆಯಲ್ಲೂ ಟ್ರಕ್ ಟರ್ಮಿನಲ್ ನಿರ್ಮಿಸುವ ಉದ್ದೇಶವಿದೆ. ಈ ಕುರಿತು ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದು ನಿರ್ಮಾಣಕ್ಕೆ ಅಗತ್ಯ ಇರುವ ಜಮೀನು ನೀಡುವಂತೆ ಕೋರಲಾಗಿದೆ. ಸರ್ಕಾರಿ ಜಮೀನುಗಳು ಲಭ್ಯವಿರದಿದ್ದರೆ, ನಿಗಮದ ವತಿಯಿಂದ ಖಾಸಗಿ ಜಮೀನು ಖರೀದಿ ಮಾಡಲಾಗುವುದು. ಇದಕ್ಕಾಗಿ ₹300 ಕೋಟಿ ಮೀಸಲಿಡುವಂತೆ ಸರ್ಕಾರಕ್ಕೆ ಕೋರಲಾಗುವುದು’ ಎಂದರು.

‘ಅಂಚಗೇರಿಯಲ್ಲಿ 56 ಎಕರೆ ಜಮೀನು ಮಂಜೂರು ಆಗಿದೆ. ಇದರಲ್ಲಿ 4 ಎಕರೆ ಗ್ರಾಮಕ್ಕೆ ಹೊಂದಿಕೊಂಡಂತಿದೆ.ಇದನ್ನು ಗ್ರಾಮಕ್ಕೆ ನೀಡುವಂತೆ ಸಾರ್ವಜನಿಕರು ಮನವಿ ಮಾಡಿದ್ದಾರೆ. ಈ ಕುರಿತು ನಿರ್ಧರಿಸಲು ಜಿಲ್ಲಾಧಿಕಾರಿ ನೇತೃತ್ವದಲ್ಲಿ ಸಮಿತಿ ರಚಿಸಲಾಗಿದೆ.ಅಂಚಟಗೇರಿಯ 43.38 ಎಕರೆಯಲ್ಲಿ, 2,000 ಟ್ರಕ್ ನಿಲುಗಡೆ, 1,500 ದ್ವಿಚಕ್ರ, 700 ನಾಲ್ಕು ಚಕ್ರದ ವಾಹನಗಳ ನಿಲುಗಡೆ ಸಾಮರ್ಥ್ಯವುಳ್ಳ ಟ್ರಕ್ ಟರ್ಮಿನಲ್ ನಿರ್ಮಿಸಲಾಗುವುದು’ ಎಂದರು.

ADVERTISEMENT

‘ರಾಜ್ಯ ಸರ್ಕಾರ 2018-19ರ ಬಜೆಟ್‌ನಲ್ಲಿ ₹110 ಕೋಟಿ ಮೀಸಲಿಟ್ಟಿದೆ.ನಿಗಮದ ವತಿಯಿಂದ ನಿರ್ಮಾಣ ಕಾಮಗಾರಿ ಕೈಗೊಳ್ಳಲಾಗುವುದು ಎಂದರು.

ವ್ಯವಸ್ಥಾಪಕ ನಿರ್ದೇಶಕ ಪುರುಷೋತ್ತಮ್, ನಿರ್ದೇಶಕ ಗೈಲುಸಾಬ್ ಎಂ ಹೊನ್ನಾಳ್, ಅಧಿಕಾರಿಗಳಾದ ಹೇಮಣ್ಣ, ಜೀವಣ್ಣ, ಗ್ರಾಮ ಲೆಕ್ಕಾಧಿಕಾರಿ ದಾನೇಶ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.