ADVERTISEMENT

‘ಐದು ಸಾವಿರ ಕಾರ್ಯಕರ್ತರು ಪಾಲ್ಗೊಳ್ಳಿ’

​ಪ್ರಜಾವಾಣಿ ವಾರ್ತೆ
Published 29 ಡಿಸೆಂಬರ್ 2022, 3:01 IST
Last Updated 29 ಡಿಸೆಂಬರ್ 2022, 3:01 IST
ನವಲಗುಂದ ಕಾಂಗ್ರೆಸ್ ಭವನದಲ್ಲಿ ಬುಧವಾರ ನಡೆದ ಕಾರ್ಯಕಾರಿಣಿಯಲ್ಲಿ ಎಐಸಿಸಿ ಕಾರ್ಯದರ್ಶಿ ಅಭಿಷೇಕ ದತ್ತ ಮಾತನಾಡಿದರು
ನವಲಗುಂದ ಕಾಂಗ್ರೆಸ್ ಭವನದಲ್ಲಿ ಬುಧವಾರ ನಡೆದ ಕಾರ್ಯಕಾರಿಣಿಯಲ್ಲಿ ಎಐಸಿಸಿ ಕಾರ್ಯದರ್ಶಿ ಅಭಿಷೇಕ ದತ್ತ ಮಾತನಾಡಿದರು   

ನವಲಗುಂದ: ‘ಮಹದಾಯಿ, ಕಳಸಾ ಬಂಡೂರಿ ಯೋಜನೆ ಅನುಷ್ಠಾನಕ್ಕೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ನಿರ್ಲಕ್ಷ್ಯ ವಹಿಸಿರುವುದನ್ನು ಖಂಡಿಸಿ ಜ.2 ರಂದು ಹುಬ್ಬಳ್ಳಿಯಲ್ಲಿ ಹಮ್ಮಿಕೊಂಡಿರುವ ಪ್ರತಿಭಟನೆಗೆ ನವಲಗುಂದ ವಿಧಾನಸಭಾ ಕ್ಷೇತ್ರದಿಂದ ಐದು ಸಾವಿರಕ್ಕೂ ಹೆಚ್ಚು ಕಾರ್ಯಕರ್ತರು ಭಾಗವಹಿಸಬೇಕು’ ಎಂದು ಎಐಸಿಸಿ ಕಾರ್ಯದರ್ಶಿ ಅಭಿಷೇಕ ದತ್ತ ಹೇಳಿದರು.

ಇಲ್ಲಿನ ಕಾಂಗ್ರೆಸ್ ಭವನದಲ್ಲಿ ಬುಧವಾರ ಏರ್ಪಡಿಸಿದ್ದ ಕಾರ್ಯಕಾರಿಣಿಯಲ್ಲಿ ಮಾತನಾಡಿದರು. ಕಾಂಗ್ರೆಸ್ ಮುಖಂಡ ಎನ್.ಎಚ್.ಕೋನರಡ್ಡಿ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪಾರಸಮಲ್ ಜೈನ್, ಅಣ್ಣಿಗೇರಿ ಬ್ಲಾಕ್ ಉಸ್ತುವಾರಿ ಪಿ.ಕೆ.
ನೀರಲಕಟ್ಟಿ, ನವಲಗುಂದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವರ್ಧಮಾ ನಗೌಡ ಹಿರೇಗೌಡ್ರ, ಅಣ್ಣಿಗೇರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಂಜು
ನಾಥ ಮಾಯಣ್ಣವರ, ಸದುಗೌಡ ಪಾಟೀಲ, ಬಾಬಾಜಾನ ಮುಧೋಳ, ನವಲಗುಂದ ಪುರಸಭೆ ಅಧ್ಯಕ್ಷ ಮೊದೀನ ಸಾಬ ಶಿರೂರ, ಉಪಾದ್ಯಕ್ಷೆ ಪದ್ಮಾವತಿ ಪೂಜಾರ, ಸುರೇಶ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT