ADVERTISEMENT

ಕಲಘಟಗಿ | ಗ್ರಾಮ ಪಂಚಾಯಿತಿಯಲ್ಲಿ ಹಣಕಾಸು ದುರುಪಯೋಗ: ಪಿಡಿಒ ಅಮಾನತು

​ಪ್ರಜಾವಾಣಿ ವಾರ್ತೆ
Published 3 ಸೆಪ್ಟೆಂಬರ್ 2025, 10:01 IST
Last Updated 3 ಸೆಪ್ಟೆಂಬರ್ 2025, 10:01 IST
   

ಧಾರವಾಡ: ಗ್ರಾಮ ಪಂಚಾಯಿತಿಯ ‘ಎಸ್ಕ್ರೊ’ ಖಾತೆಯಿಂದ ಅಕ್ರಮವಾಗಿ ಖಾಸಗಿ ವ್ಯಕ್ತಿಗಳಿಗೆ ಹಣ ವರ್ಗಾವಣೆ ಪ್ರಕರಣದಲ್ಲಿ ಕಲಘಟಗಿ ತಾಲ್ಲೂಕಿನ ಉಗ್ನಿಕೇರಿ ಗ್ರಾಮ ಪಂಚಾಯಿತಿಯ ಪಿಡಿಒ ಅಬ್ದುಲ್‌ ರಜಾಕ್‌ ಎಚ್‌.ಮನಿಯಾರ ಅವರನ್ನು ಅಮಾನತುಗೊಳಿಸಲಾಗಿದೆ.

ಜಿಲ್ಲಾ ಪಂಚಾಯಿತಿ ಸಿಇಒ ಭುವನೇಶ ಪಾಟೀಲ ಅವರು ಅಮಾನತು ಆದೇಶ ಹೊರಡಿಸಿದ್ದಾರೆ. ಮನಿಯಾರ ಅವರು ಈ ಹಿಂದೆ ಗಳಗಿ ಹುಲಕೊಪ್ಪ ಗ್ರಾಮ ಪಂಚಾಯಿತಿಯಲ್ಲಿ ಕಾರ್ಯನಿರ್ವಹಿಸುವಾಗ ಹಣಕಾಸಿನ ದುರಪಯೋಗ ಮಾಡಿರುವುದು ಮೇಲ್ನೋಟಕ್ಕೆ ಕಂಡುಬಂದಿದೆ. ‘ಎಸ್ಕ್ರೊ’ ಖಾತೆಯಲ್ಲಿನ ಅನುದಾನವನ್ನು ವಿದ್ಯುತ್‌ ಬಿಲ್‌ ನಿಟ್ಟಿನಲ್ಲಿ ಕಡ್ಡಾಯವಾಗಿ ಹೆಸ್ಕಾಂಗೆ ಪಾವತಿಸುವಂತೆ ಸುತ್ತೋಲೆಯಲ್ಲಿ ತಿಳಿಸಿದ್ದರೂ ಮನಿಯಾರ ಅವರ ನಿಯಮವನ್ನು ಪಾಲಿಸಿಲ್ಲ ಎಂದು ಆದೇಶದಲ್ಲಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT