ADVERTISEMENT

ಹುಬ್ಬಳ್ಳಿ: ದಲಿತರ ಕೇರಿಯಲ್ಲಿ ಪೇಜಾವರ ಶ್ರೀ ಪಾದಯಾತ್ರೆ

ಷಷ್ಟ್ಯಬ್ದ ಪ್ರಯುಕ್ತ ಶ್ರೀಗಳಿಗೆ ನಾಣ್ಯಗಳ ತುಲಾಭಾರ

​ಪ್ರಜಾವಾಣಿ ವಾರ್ತೆ
Published 12 ಅಕ್ಟೋಬರ್ 2023, 14:44 IST
Last Updated 12 ಅಕ್ಟೋಬರ್ 2023, 14:44 IST
ಹುಬ್ಬಳ್ಳಿಯ ಹೆಗ್ಗೇರಿಯ ಭುವನೇಶ್ವರಿ ಕಾಲೊನಿಯ ದಲಿತರ ಕೇರಿಯಲ್ಲಿ ಉಡುಪಿಯ ಪೇಜಾವರ ಮಠದ ವಿಶ್ವಪ್ರಸನ್ನತೀರ್ಥ ಶ್ರೀಗಳು ಗುರುವಾರ ಪಾದಯಾತ್ರೆ ನಡೆಸಿದರು
–‍ಪ್ರಜಾವಾಣಿ ಚಿತ್ರ
ಹುಬ್ಬಳ್ಳಿಯ ಹೆಗ್ಗೇರಿಯ ಭುವನೇಶ್ವರಿ ಕಾಲೊನಿಯ ದಲಿತರ ಕೇರಿಯಲ್ಲಿ ಉಡುಪಿಯ ಪೇಜಾವರ ಮಠದ ವಿಶ್ವಪ್ರಸನ್ನತೀರ್ಥ ಶ್ರೀಗಳು ಗುರುವಾರ ಪಾದಯಾತ್ರೆ ನಡೆಸಿದರು –‍ಪ್ರಜಾವಾಣಿ ಚಿತ್ರ   

ಹುಬ್ಬಳ್ಳಿ: ಇಲ್ಲಿನ ಹೆಗ್ಗೇರಿಯ ಭುವನೇಶ್ವರಿ ನಗರದ ದಲಿತರ ಕಾಲೊನಿಯಲ್ಲಿ ಉಡುಪಿಯ ಪೇಜಾವರ ಮಠದ ವಿಶ್ವಪ್ರಸನ್ನತೀರ್ಥ ಸ್ವಾಮೀಜಿ ಗುರುವಾರ ಪಾದಯಾತ್ರೆ ನಡೆಸಿದರು. ಭಕ್ತರು ಹೂವು ಸುರಿದು ಭಕ್ತಿ ಸಮರ್ಪಿಸಿದರು. ಜೈಶ್ರೀರಾಮ್, ಬೋಲೋ ಭಾರತ್‌ ಮಾತಾಕಿ ಜೈ ಘೋಷಣೆ ಕೂಗಿದರು‌.

ವಿಶ್ವ ಹಿಂದೂ ಪರಿಷತ್ ಹುಬ್ಬಳ್ಳಿ ಮಹಾನಗರದ ಧರ್ಮಚಾರಿ ಸಂಪರ್ಕ ಪ್ರಮುಖ ಯಲ್ಲಪ್ಪ ಬಾಗಲಕೋಟಿ ಅವರ ಮನೆಗೆ ಭೇಟಿ ನೀಡಿದ ಸ್ವಾಮೀಜಿ, ಫಲಮಂತ್ರಾಕ್ಷತೆ ವಿತರಿಸಿದರು. ವಿಶ್ವ ಹಿಂದೂ ಪರಿಷತ್ ಉತ್ತರ ಪ್ರಾಂತ ಪ್ರಚಾರಕ ಬಸವರಾಜ್ ಅವರು ಕುಟುಂಬ ಸದಸ್ಯರನ್ನು ಸ್ವಾಮೀಜಿಗೆ ಪರಿಚಯಿಸಿದರು. 

ಭುವನೇಶ್ವರಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಬಳಿಕ ಮಾತನಾಡಿದ ಸ್ವಾಮೀಜಿ, ‘ದೇಶದಲ್ಲಿರುವ ಎಲ್ಲರೂ ಸನಾತನ ಧರ್ಮೀಯರು. ಶ್ರೀರಾಮ ಧರ್ಮದ ಪ್ರತಿರೂಪ. ಶತಮಾನಗಳ ನ್ಯಾಯಯುತ ಹೋರಾಟದ ಫಲವಾಗಿ ಅಯೋಧ್ಯೆಯಲ್ಲಿ ಶ್ರೀರಾಮಮಂದಿರ ನಿರ್ಮಾಣವಾಗುತ್ತಿದೆ’ ಎಂದು ಹೇಳಿದರು.

ADVERTISEMENT

‘ಯಾರಿಗೂ ಅನ್ಯಾಯ ಮಾಡದೆ ಎಲ್ಲರೂ ಒಂದಾಗಿ ಬಾಳಿದರೆ ಅದು ದೇವರಿಗೆ ಸಲ್ಲಿಸುವ ದೊಡ್ಡ ಪೂಜೆ. ಇನ್ನೊಬ್ಬರನ್ನು ಹೊಡೆಯುತ್ತೇವೆ, ಬಡಿಯುತ್ತೇವೆ ಎನ್ನುವುದು ರಾವಣನ ಸಂಸ್ಕೃತಿ. ಸುಖ, ಶಾಂತಿ, ನೆಮ್ಮದಿ ಬಯಸುವವರು ರಾಮಚಂದ್ರನ ಆದರ್ಶ ಪರಿಪಾಲಿಸಬೇಕು’ ಎಂದರು.

ನಾಣ್ಯದ ತುಲಾಭಾರ: ವಿಶ್ವಪ್ರಸನ್ನ ತೀರ್ಥ ಶ್ರೀಗಳ ಷಷ್ಟ್ಯಬ್ದ ಪ್ರಯುಕ್ತ ಅಖಿಲ ಭಾರತ ಮಾಧ್ವ ಮಹಾಮಂಡಲದ ವತಿಯಿಂದ ಹುಬ್ಬಳ್ಳಿಯ ಶ್ರೀಕೃಷ್ಣ ಕಲ್ಯಾಣ ಮಂಟಪದಲ್ಲಿ ಗುರುವಾರ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಶ್ರೀಗಳಿಗೆ ನಾಣ್ಯದ ತುಲಾಭಾರ‌ ಮಾಡಲಾಯಿತು.

ಹುಬ್ಬಳ್ಳಿಯ ಶ್ರೀಕೃಷ್ಣ ಕಲ್ಯಾಣ ಮಂಟಪದಲ್ಲಿ ವಿಶ್ವಪ್ರಸನ್ನತೀರ್ಥ ಶ್ರೀಗಳ ಷಷ್ಟ್ಯಬ್ದ ಅಂಗವಾಗಿ ಅಖಿಲ ಭಾರತ ಮಾಧ್ವ ಮಹಾಮಂಡಲದ ವತಿಯಿಂದ ಗುರುವಾರ ನಾಣ್ಯದ ತುಲಾಭಾರ‌ ಮಾಡಲಾಯಿತು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.