ನವಲಗುಂದ: ಗ್ರಾಮ ಪಂಚಾಯ್ತಿ ವ್ಯಾಪ್ತಿಗೆ ಬರುವ ಸರ್ಕಾರದ ಎಲ್ಲ ಯೋಜನೆಗಳನ್ನು ಜನ ಸಾಮಾನ್ಯರಿಗೂ ತಿಳಿಯುವಂತೆ ಅರಿವು ಮೂಡಿಸಬೇಕು ಎಂದು ಕಾಂಗ್ರೆಸ್ ಮುಖಂಡ ಬಸವರಾಜ ಮಾದರ ಒತ್ತಾಯಿಸಿದರು.
ಈಚೆಗೆ ತಾಲ್ಲೂಕಿನ ಜಾವೂರ ಗ್ರಾಮ ಪಂಚಾಯ್ತಿಯಲ್ಲಿ ನಡೆದ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಅಡಿಯಲ್ಲಿ ಮಾಡಲಾಗಿರುವ ಕಾಮಗಾರಿಗಳ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.
ಇಲ್ಲಿಯವರೆಗೆ ಮಾಡಲಾದ ಕಾಮಗಾರಿಗಳ ಬಗ್ಗೆ ಗ್ರಾಮ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿ ಎಂ.ಕೆ.ಹೂಳಿ ಮಾಹಿತಿ ನೀಡಿದರು.
ಗ್ರಾಮ ಪಂಚಾಯ್ತಿ ಅಧ್ಯಕ್ಷ ಶಿವಾನಂದ ಅವಡಿ, ಸದಸ್ಯರಾದ ಶಿವಾನಗೌಡ ಪಾಟೀಲ, ಹುಚ್ಚಪ್ಪ ಮುಡೆಕ್ಕನವರ, ಮಹಾದೇವಿ ವಾಲ್ಮೀಕಿ, ಗಂಗವ್ವ ಅವಡಿ, ವಿಜಯ ಪೂಜಾರ, ಹನಮಂತಗೌಡ ಪಾಟೀಲ, ಉದಯಗೌಡ ಪಾಟೀಲ, ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಎಸ್.ತೋಟಗೇರ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.