ಧಾರವಾಡ: ಪ್ಲಾಸ್ಟಿಕ್ ಬಳಕೆ ತ್ಯಜಿಸಲು ಜನರಲ್ಲಿ ಜಾಗೃತಿ ಮೂಡಿಸಲು ಹುಬ್ಬಳ್ಳಿ–ಧಾರವಾಡ ಮಹಾನಗರ ಪಾಲಿಕೆ 10 ಸಾವಿರಕ್ಕೂ ಹೆಚ್ಚು ಪ್ಲಾಸ್ಟಿಕ್ ಬಾಟಲಿ ಬಳಸಿ ಮೂಷಕನ ಮೂರ್ತಿ ಸಿದ್ಧಪಡಿಸಿದೆ.
‘ಪ್ಲಾಸ್ಟಿಕ್ ನಿಷೇಧ ಮತ್ತು ಪರಿಸರ ಸ್ನೇಹಿ ಗಣೇಶೋತ್ಸವಕ್ಕೆ ಪಾಲಿಕೆ ಆದ್ಯತೆ ನೀಡಿದೆ. ಜನದಟ್ಟಣೆ ಇರುವ ಸ್ಥಳದಲ್ಲಿ ಇದನ್ನು ಇಟ್ಟು, ಜನರಲ್ಲಿ ಜಾಗೃತಿ ಮೂಡಿಸಲಾಗುವುದು’ ಎಂದು ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಮೇಯರ್ ಜ್ಯೋತಿ ಪಾಟೀಲ ತಿಳಿಸಿದ್ದಾರೆ.
ಪಾಲಿಕೆಯ 12 ವಲಯಗಳಿಂದ ಸಂಗ್ರಹಿಸಿದ ಪ್ಲಾಸ್ಟಿಕ್ ಬಾಟಲಿಗಳಿಂದ 20 ಅಡಿ ಎತ್ತರದ ಮೂಷಕವನ್ನು ತಯಾರಿಸಿದ್ದೇವೆ ಎಂದು ಅವರು ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.