ADVERTISEMENT

ಜಗತ್ತಿಗೆ ಯೋಗದ ಮಹತ್ವ ತಿಳಿಸಿದ ಮೋದಿ: ಶೆಟ್ಟರ್

​ಪ್ರಜಾವಾಣಿ ವಾರ್ತೆ
Published 21 ಜೂನ್ 2022, 3:01 IST
Last Updated 21 ಜೂನ್ 2022, 3:01 IST
ಪಿರಾಮಿಡ್ ಧ್ಯಾನಕೇಂದ್ರದಲ್ಲಿ ಅಂತರರಾಷ್ಟ್ರೀಯ ಯೋಗ ದಿನ
ಪಿರಾಮಿಡ್ ಧ್ಯಾನಕೇಂದ್ರದಲ್ಲಿ ಅಂತರರಾಷ್ಟ್ರೀಯ ಯೋಗ ದಿನ   

ಹುಬ್ಬಳ್ಳಿ: ನಗರದ ನೃಪತುಂಗ ಬೆಟ್ಟದ ಬಳಿಯ ಪಿರಾಮಿಡ್ ಧ್ಯಾನಕೇಂದ್ರದಲ್ಲಿ ಅಂತರರಾಷ್ಟ್ರೀಯ ಯೋಗ ದಿನದ ಅಂಗವಾಗಿ, ಸಾಮೂಹಿಕ ಯೋಗಾಭ್ಯಾಸ ನಡೆಯಿತು.

ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಶಾಸಕ ಜಗದೀಶ ಶೆಟ್ಟರ್‌ ಮಾತನಾಡಿ, ಅಂತರರಾಷ್ಟ್ರೀಯ ಮಟ್ಟದಲ್ಲಿ ಯೋದ ದಿನವನ್ನು ಆಚರಣೆ ಮಾಡಲಾಗುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಯೋಗದ ಮಹತ್ವವನ್ನು ಜಗತ್ತಿಗೆ ತಿಳಿಸಿ ಕೊಟ್ಟಿದ್ದಾರೆ. ಅವರ ಕರೆಯಂತೆ ವಿಶ್ವದಾದ್ಯಂತ ಯೋಗ ದಿನ ಆಚರಿಸಲಾಗುತ್ತಿದೆ ಎಂದರು.

ಯೋಗದಿಂದ ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು ಕಾಪಾಡಿಕೊಳ್ಳಲು ಸಾಧ್ಯ. ಕಳೆದ ಹದಿನೈದು ಇಪ್ಪತ್ತು ವರ್ಷಗಳಿಂದ ನಾನು ಯೋಗಾಭ್ಯಾಸ ಮಾಡುತ್ತಿದ್ದೇನೆ. ವೈಯಕ್ತಿಕವಾಗಿ ಕೊರೋನಾ, ರಕ್ತದೊತ್ತಡ, ಮಧುಮೇಹ ಬಾರದಂತೆ ನೋಡಿಕೊಳ್ಳಲು ಯೋಗ ಸಹಕಾರಿಯಾಗಿದೆ ಎಂದು ಹೇಳಿದರು.

ADVERTISEMENT

ಹುಡಾ ಅಧ್ಯಕ್ಷ ನಾಗೇಶ ಕಲಬುರ್ಗಿ, ಮಹಾನಗರ ಪಾಲಿಕೆ ಸದಸ್ಯ ರಾಜಣ್ಣ ಕೊರವಿ ಹಾಗೂ ಯೋಗಗುರು ಸಂಗಮೇಶ ನಿಂಬರಗಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.