ADVERTISEMENT

ಮನೆ ಬಳಿ ಕಣವಿ ಪಾರ್ಥೀವ ಶರೀರ ದರ್ಶನಕ್ಕೆ ವ್ಯವಸ್ಥೆ

​ಪ್ರಜಾವಾಣಿ ವಾರ್ತೆ
Published 16 ಫೆಬ್ರುವರಿ 2022, 8:22 IST
Last Updated 16 ಫೆಬ್ರುವರಿ 2022, 8:22 IST
ನಾಡೋಜ ಡಾ. ಚೆನ್ನವೀರ ಕಣವಿ ಅವರ ಪಾರ್ಥೀವ ಶರೀರ
ನಾಡೋಜ ಡಾ. ಚೆನ್ನವೀರ ಕಣವಿ ಅವರ ಪಾರ್ಥೀವ ಶರೀರ   

ಧಾರವಾಡ: ನಾಡೋಜ ಡಾ. ಚೆನ್ನವೀರ ಕಣವಿ ಅವರ ಪಾರ್ಥೀವ ಶರೀರವನ್ನು ಇಲ್ಲಿನ ಕಲ್ಯಾಣ ನಗರದಲ್ಲಿರುವ ಅವರ ಮನೆ ಬಳಿ ದರ್ಶನಕ್ಕೆ ಇಡಲಾಗಿದೆ. ಗಣ್ಯರು, ಸಂಬಂಧಿಕರು ಹಾಗೂ ಅವರ ಅಭಿಮಾನಿಗಳು ಕಣವಿ ಅವರ ಅಂತಿಮ ದರ್ಶನ ಪಡೆದರು.

ಬೆಳಿಗ್ಗೆ ನಿಧನದ ಸುದ್ದಿ ತಿಳಿಯುತ್ತಿದ್ದಂತೆ ಸಂಬಂಧಿಕರು ಕಣವಿ ಅವರ ಮನೆಗೆ ಭೇಟಿ ನೀಡಿದರು. ಕುಟುಂಬ ವರ್ಗದವರಿಗೆ ಸಾಂತ್ವನ ಹೇಳಿದರು.

ಶಾಸಕ ಅರವಿಂದ ಬೆಲ್ಲದ, ಕರ್ನಾಟಕ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಚಂದ್ರಕಾಂತ ಬೆಲ್ಲದ ಸೇರಿದಂತೆ ವಿವಿಧ ಗಣ್ಯರು ಕಣವಿ ಅವರ ಅಂತಿಮ ದರ್ಶನ ಪಡೆದರು.

ADVERTISEMENT

ಕೆಸಿಡಿ ಆವರಣದಲ್ಲಿ ಕಣವಿ ಅಂತಿಮ ದರ್ಶನಕ್ಕೆ ವ್ಯವಸ್ಥೆ

ಧಾರವಾಡ: ಚೆಂಬೆಳಕಿನ ಕವಿ, ನಾಡೋಜ ಡಾ.ಚೆನ್ನವೀರ ಕಣವಿ ಅವರ ಪಾರ್ಥಿವ ಶರೀರವನ್ನು ಸಾರ್ವಜನಿಕ ದರ್ಶನಕ್ಕಾಗಿ ಕೆಸಿಡಿ ಆವರಣದಲ್ಲಿ ಇರಿಸಲಾಗುವುದು ಎಂದು ಜಿಲ್ಲಾಧಿಕಾರಿ ನಿತೇಶ್‌ ಪಾಟೀಲ ತಿಳಿಸಿದ್ದಾರೆ.

ಕವಿ ಕಣವಿ ಪಾರ್ಥಿವ ಶರೀರದ ಸಾರ್ವಜನಿಕ ದರ್ಶನಕ್ಕೆ ಕೆಸಿಡಿ ಆವರಣದಲ್ಲಿ ಜಿಲ್ಲಾಡಳಿತದಿಂದ ಸಿದ್ದತೆ ಮಾಡಿಕೊಳ್ಳಲಾಗುತ್ತಿದೆ. ಮಧ್ಯಾಹ್ನ 1 ರಿಂದ 3ರವರೆಗೆ ಅಂತಿಮ ದರ್ಶನ ಪಡೆಯಬಹುದಾಗಿದೆ.

ಕಣವಿ ಅವರ ಅಂತ್ಯಕ್ರಿಯೆ ಸಂಜೆ 5ಕ್ಕೆ ಕೆಲಗೇರಿ ಸಮೀಪದಲ್ಲಿರುವ ಅವರ ಫಾರ್ಮ್ ಹೌಸದಲ್ಲಿ ನಡೆಸಲು ಅವರ ಕುಟುಂಬ ಸದಸ್ಯರು ನಿರ್ಧರಿಸಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.