ADVERTISEMENT

ರೈಫಲ್ ಶೂಟಿಂಗ್ ಚಾಂಪಿಯನ್ ಶಿಪ್‍ಗೆ ಪೊಲೀಸ್ ಮಕ್ಕಳ ವಸತಿ ಶಾಲೆ ಅಯ್ಕೆ 

​ಪ್ರಜಾವಾಣಿ ವಾರ್ತೆ
Published 2 ಜನವರಿ 2026, 4:47 IST
Last Updated 2 ಜನವರಿ 2026, 4:47 IST
ಧಾರವಾಡದ ಎನ್.ಎ.ಮುತ್ತಣ್ಣ ಸ್ಮಾರಕ ಪೊಲೀಸ್ ಮಕ್ಕಳ ವಸತಿ ಶಾಲೆಯಲ್ಲಿ  ಶೂಟಿಂಗ್ ಚಾಂಪಿಯನ್ ಶಿಪ್‍ಗೆ ಆಯ್ಕೆಯಾದ ವಿದ್ಯಾರ್ಥಿಗಳನ್ನು ಅಭಿನಂದಿಸಲಾಯಿತು 
ಧಾರವಾಡದ ಎನ್.ಎ.ಮುತ್ತಣ್ಣ ಸ್ಮಾರಕ ಪೊಲೀಸ್ ಮಕ್ಕಳ ವಸತಿ ಶಾಲೆಯಲ್ಲಿ  ಶೂಟಿಂಗ್ ಚಾಂಪಿಯನ್ ಶಿಪ್‍ಗೆ ಆಯ್ಕೆಯಾದ ವಿದ್ಯಾರ್ಥಿಗಳನ್ನು ಅಭಿನಂದಿಸಲಾಯಿತು    

ಧಾರವಾಡ: ನಗರದ ಎನ್.ಎ.ಮುತ್ತಣ್ಣ ಸ್ಮಾರಕ ಪೊಲೀಸ್ ಮಕ್ಕಳ ವಸತಿ ಶಾಲೆಯ ವಿದ್ಯಾರ್ಥಿಗಳಾದ ನವೀನಕುಮಾರ ಚವಾಣ, ಪ್ರಸನ್ನ ಯಾದವ, ಮೊಹಮ್ಮದ್ ಹ್ಯಾರಿಸ್ ಮದರಖಂಡಿ ಹಾಗೂ ವಿವೇಕ ಬೋರಳಕರ ಅವರು ಈಚೆಗೆ ನಡೆದ ರಾಜ್ಯಮಟ್ಟದ ರೈಫಲ್ ಶೂಟಿಂಗ್ ಸ್ಪರ್ಧೆಯಲ್ಲಿ ಉತ್ತಮ ಪ್ರದರ್ಶನ ನೀಡಿದ್ದಾರೆ.

ಜ.5 ರಿಂದ 9ರವರೆಗೆ ಭೋಪಾಲ್‍ನಲ್ಲಿ ನಡೆಯಲಿರುವ 69ನೇ ರಾಷ್ಟ್ರಮಟ್ಟದ 14 ವರ್ಷ ವಯೋಮಿತಿಯ ಬಾಲಕರ ಶೂಟಿಂಗ್ ಚಾಂಪಿಯನ್ ಶಿಪ್‍ಗೆ ಆಯ್ಕೆಯಾಗಿದ್ದಾರೆ. ಎನ್.ಎ.ಮುತ್ತಣ್ಣ ಸ್ಮಾರಕ ಪೊಲೀಸ್‌ ಮಕ್ಕಳ ವಸತಿ ಶಾಲೆಯ ಅಧ್ಯಕ್ಷ ಚೇತನಕುಮಾರ ರಾಠೋಡ, ಜಿಲ್ಲಾ ಪೆೊಲೀಸ್‌ ವರಿಷ್ಠಾಧಿಕಾರಿ ಗುಂಜನ್ ಆರ್ಯ, ಶಾಲೆಯ ಆಡಳಿತ ಮಂಡಳಿಯ ಸದಸ್ಯರು, ಪ್ರಾಚಾರ್ಯ ಹಾಗೂ ಶಿಕ್ಷಕರು ವಿದ್ಯಾರ್ಥಿಗಳನ್ನು ಅಭಿನಂದಿಸಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT