ADVERTISEMENT

ಹುಬ್ಬಳ್ಳಿ: ಪೊಲೀಸ್‌ ಇನ್ಸ್‌ಪೆಕ್ಟರ್‌ ಪ್ರಭುಸೂರಿನ್‌ ವರ್ಗಾವಣೆ

​ಪ್ರಜಾವಾಣಿ ವಾರ್ತೆ
Published 30 ನವೆಂಬರ್ 2020, 1:22 IST
Last Updated 30 ನವೆಂಬರ್ 2020, 1:22 IST

ಹುಬ್ಬಳ್ಳಿ: ನವನಗರದಲ್ಲಿ ನಡೆದ ಗಲಾಟೆ ವೇಳೆ ಎಪಿಎಂಸಿ ನವನಗರ ಠಾಣೆ ಪೊಲೀಸರು ಮೂವರನ್ನು ಬಂಧಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಲಾಖೆಯ ಹಿರಿಯ ಅಧಿಕಾರಿಗಳು ತನಿಖೆ ಪೂರ್ಣಗೊಳಿಸಿದ್ದಾರೆ. ಅಂತಿಮವಾಗಿ ಠಾಣೆಯ ಪೊಲೀಸ್‌ ಇನ್‌ಸ್ಟೆಕ್ಟರ್‌ ಪ್ರಭು ಸೂರಿನ್ ಅವರನ್ನು ಪೊಲೀಸ್‌ ಆಯುಕ್ತರ ಕಚೇರಿಯಲ್ಲಿನ ಸಿಎಸ್‌ಬಿ ವಿಭಾಗಕ್ಕೆ ವರ್ಗಾವಣೆ ಮಾಡಲಾಗಿದೆ.

‘ಕರ್ನಾಟಕ ವೃತ್ತದಲ್ಲಿ ರೌಡಿ ಶೀಟರ್‌ ಪ್ರವೀಣ್‌ ಪೂಜಾರಿ, ಮಲ್ಲಯ್ಯ ಹಿರೇಮಠ ಮತ್ತು ವಕೀಲ ವಿನೋದ ಪಾಟೀಲ ಎಂಬುವರು ರಸ್ತೆ ಮೇಲೆ ಬೈದಾಡಿಕೊಂಡು, ಜಗಳವಾಡುತ್ತಿದ್ದರು. ಘಟನಾ ಸ್ಥಳಕ್ಕೆ ತೆರಳಿದಾಗ ಪೊಲೀಸರ ವಿರುದ್ಧವೇ ತಿರುಗಿ ಬಿದ್ದಿದ್ದರು’ ಎಂದು ಖುದ್ದು ಪ್ರಭು ಸೂರಿನ್ ನವನಗರ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು.

ಈ ಘಟನೆ ಖಂಡಿಸಿ ಧಾರವಾಡದಲ್ಲಿ ವಕೀಲರು ಪ್ರತಿಭಟನೆ ನಡೆಸಿದ್ದರು. ಇದರ ಬಗ್ಗೆ ಸಂಪೂರ್ಣ ವಿಚಾರಣೆ ನಡೆಸುವಂತೆ ದಕ್ಷಿಣ ವಿಭಾಗದ ಎಸಿಪಿ ಅವರಿಗೆ ಜವಾಬ್ದಾರಿ ವಹಿಸಲಾಗಿತ್ತು. ಅವರ ವರದಿ ಬಳಿಕ ಈ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.