ADVERTISEMENT

ಜನಸಂಖ್ಯೆ ನಿಯಂತ್ರಣ ಅಗತ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ

ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ

​ಪ್ರಜಾವಾಣಿ ವಾರ್ತೆ
Published 8 ಡಿಸೆಂಬರ್ 2025, 4:11 IST
Last Updated 8 ಡಿಸೆಂಬರ್ 2025, 4:11 IST
ನವಲಗುಂದಲ್ಲಿ ಭಾನುವಾರ ನಡೆದ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌, ಶಾಸಕ ಕೋನರಡ್ಡಿ ಇತರರು ಪಾಲ್ಗೊಂಡಿದ್ದರು ಪ್ರಜಾವಾಣಿ ಚಿತ್ರ
ನವಲಗುಂದಲ್ಲಿ ಭಾನುವಾರ ನಡೆದ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌, ಶಾಸಕ ಕೋನರಡ್ಡಿ ಇತರರು ಪಾಲ್ಗೊಂಡಿದ್ದರು ಪ್ರಜಾವಾಣಿ ಚಿತ್ರ    

ನವಲಗುಂದ: ‘ಇಲ್ಲಿನ ಸಾಮೂಹಿಕ ವಿವಾಹದಲ್ಲಿ 75 ಜೋಡಿಗಳು ದಾಂಪತ್ಯಕ್ಕೆ ಕಾಲಿಟ್ಟಿವೆ. ದಂಪತಿಗಳು ಒಂದು ಅಥವಾ ಎರಡು ಮಕ್ಕಳು ಮಾಡಿಕೊಳ್ಳಬೇಕು, ಜನಸಂಖ್ಯೆ ನಿಯಂತ್ರಣ ಮಾಡಬೇಕು’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಶಾಸಕ ಕೋನರಡ್ಡಿ ಅವರು ಪಟ್ಟಣದ ಮಾಡೆಲ್ ಹೈಸ್ಕೂಲ್ ಆವರಣದಲ್ಲಿ ಭಾನುವಾರ ಆಯೋಜಿಸಿದ್ದ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಮಾತನಾಡಿದರು.

‘ದೇಶದ ಜನಸಂಖ್ಯೆ ಹೆಚ್ಚಾಗಿದೆ. ಜನಸಂಖ್ಯೆಯಲ್ಲಿ ಭಾರತವು ಚೀನಾವನ್ನೂ ಹಿಂದಿಕ್ಕಿದೆ’ ಎಂದು ಹೇಳಿದರು.

ADVERTISEMENT

‘ಜನಸಂಖ್ಯೆ ನಿಯಂತ್ರಣವಾಗಬೇಕಾದರೆ ದಂಪತಿಗಳು ಎರಡಕ್ಕಿಂತ ಹೆಚ್ಚು ಮಕ್ಕಳನ್ನು ಮಾಡಿಕೊಳ್ಳಬಾರದು. ದಂಪತಿಗಳು ಉತ್ತಮ ಬದುಕು ಕಟ್ಟಿಕೊಳ್ಳಬೇಕು’ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಶಾಸಕ ಎನ್.ಎಚ್.ಕೋನರಡ್ಡಿ ಪುತ್ರ ನವೀನ ಕುಮಾರ್- ಸಹನಾ ಆರತಕ್ಷತೆ ನಡೆಯಿತು. ಸಚಿವರಾದ ಕೆ.ಜೆ.ಜಾರ್ಜ್, ಡಾ.ಎಚ್.ಸಿ.ಮಹಾದೇವಪ್ಪ, ಕೃಷ್ಣ ಭೈರೆಗೌಡ, ರಾಮಲಿಂಗಾ ರಡ್ಡಿ, ಸಂತೋಷ ಲಾಡ್, ಶಾಸಕರಾದ ಬಸವರಾಜ ರಾಯರೆಡ್ಡಿ, ಪ್ರಸಾದ ಅಬ್ಬಯ್ಯ, ಬಸವರಾಜ ಶಿವಣ್ಣವರ, ಹೆಸ್ಕಾಂ ಅಧ್ಯಕ್ಷ ಸೈಯದ್ ಅಜಂಪೀರ್‌ ಖಾದ್ರಿ, ಮುಖಂಡ ಮೋಹನ ಲಿಂಬಿಕಾಯಿ ಇದ್ದರು.

ಕೇಂದ್ರ ಆಹಾರ ಸಚಿವ ಪ್ರಲ್ಹಾದ ಜೋಶಿ ಅವರು ಕಾರ್ಯಕ್ರಮದಲ್ಲಿ ಪಾಲ್ಗೊಂಡು ಜೋಡಿಗಳಿಗೆ ಶುಭ ಹಾರೈಸಿದರು.

ನವಲಗುಂದಲ್ಲಿ ಭಾನುವಾರ ನಡೆದ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಜನರು 06dec07mass marriage dwd03 ನವಲಗುಂದಲ್ಲಿ ಭಾನುವಾರ ನಡೆದ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಜನರು
ನವಲಗುಂದಲ್ಲಿ ಭಾನುವಾರ ನಡೆದ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಜನರು
75 ಜೋಡಿಯ ವಿವಾಹವನ್ನು ಕ್ಷೇತ್ರದ ಜನ ಮಾಡಿದ್ದಾರೆ. 10 ಎಕರೆ ಪ್ರದೇಶದಲ್ಲಿ ಊಟದ ವ್ಯವಸ್ಥೆ ಮಾಡಲಾಗಿದೆ ಮತ್ತು 26 ಎಕರೆ ಪ್ರದೇಶದಲ್ಲಿ ಪಾರ್ಕಿಂಗ್ ವ್ಯವಸ್ಥೆ ಮಾಡಿದ್ದೇವೆ. ಎಲ್ಲರೂ ಜೋಡಿಗಳಿಗೆ ಶುಭಹಾರೈಸಿದ್ದಾರೆ
ಎನ್.ಎಚ್.ಕೋನರಡ್ಡಿ ಶಾಸಕ

‘ಆದರ್ಶ ದಂಪತಿಯಾಗಿರಿ’

‘ಹೊಸ ಬಾಳಿಗೆ ಕಾಲಿಟ್ಟ ವಧು- ವರರು ಆದರ್ಶ ದಂಪತಿಗಳಾಗಬೇಕು. ಸ್ವಂತ ಉದ್ಯೋಗ ಆರಂಭಿಸಬೇಕು. ಉದ್ಯೋಗದಾತರಾಗಬೇಕು. ಜೀವನದಲ್ಲಿ ಸಾಧನೆ ಮಾಡಬೇಕು’ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು. ‘ಕುವೆಂಪು ಹೇಳಿದಂತೆ ನಾಡನ್ನು ಸರ್ವ ಜನಾಂಗದ ಶಾಂತಿಯ ತೋಟವಾಗಿಸುವುದು ನಮ್ಮ ಆಶಯ. ಸಾಮಾಜಿಕ ನ್ಯಾಯ ಜಾತ್ಯತೀತ ತತ್ವಗಳು ನಮ್ಮ ಧ್ಯೇಯ’ ಎಂದರು. ‘ಹುಳಿ ಪೆಟ್ಟು ಬೀಳದೆ ಕಲ್ಲು ಶಿಲೆಯಾಗಲು ಸಾಧ್ಯ ಇಲ್ಲ. ಕ್ಷೇತ್ರದ ಜನರ ಆಶೀರ್ವಾದದಿಂದ ಶಾಸಕ ಎನ್‌.ಎಚ್‌.ಕೋನರೆಡ್ಡಿ ಅವರು ಇಂಥ ಕಾರ್ಯಕ್ರಮ ಆಯೋಜಿಸಲು ಸಾಧ್ಯವಾಗಿದೆ’ ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.