ADVERTISEMENT

ಪೋಸ್ಟ್ ಡಿಪ್ಲೊಮಾ ಇನ್ ಮೆಕೆಟ್ರಾನಿಕ್ಸ್: ಅರ್ಜಿ ಆಹ್ವಾನ

​ಪ್ರಜಾವಾಣಿ ವಾರ್ತೆ
Published 5 ಜುಲೈ 2023, 15:37 IST
Last Updated 5 ಜುಲೈ 2023, 15:37 IST

ಹುಬ್ಬಳ್ಳಿ: ಇಲ್ಲಿನ ಜಿಟಿಟಿಸಿಯಲ್ಲಿರುವ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರದಲ್ಲಿ ಒಂದು ವರ್ಷದ ಅವಧಿಯ ಪೋಸ್ಟ್ ಡಿಪ್ಲೊಮಾ ಇನ್ ಮೆಕೆಟ್ರಾನಿಕ್ಸ್ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದೆ.

ಈ ಕೋರ್ಸ್ ಎಲೆಕ್ಟ್ರಿಕಲ್ ಇನ್ಸ್ಟಾಲೇಶನ್, ಎಲೆಕ್ಟ್ರಿಕಲ್ ಪ್ಯಾನೆಲ್ ಡಿಸೈನ್, ಮೆಕ್ಯಾನಿಕಲ್ ಅಂಡ್ ಸಿಸ್ಟೆಮ್ ಡಿಸೈನ್, ಪಿಎಲ್‌ಸಿ, ಸ್ಕಾಡಾ, ಹೈಡ್ರಾಲಿಕ್ಸ್, ನ್ಯುಮಾಟಿಕ್ಸ್, ಸಿಎನ್‌ಸಿ ಮೈಂಟೇನನ್ಸ್, ಇಂಡಸ್ಟ್ರೀಸ್‌  4.0 ಮತ್ತು ರೋಬೋಟಿಕ್ಸ್ ವಿಷಯಗಳನ್ನು ಒಳಗೊಂಡಿದೆ.

ಡಿಪ್ಲೊಮಾ ಅಥವಾ ಎಂಜಿನಿಯರಿಂಗ್‌ ಪೂರ್ಣಗೊಳಿಸಿದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಉಚಿತವಾಗಿ ತರಬೇತಿ ನೀಡಲಾಗುವುದು.

ADVERTISEMENT

ಜಿಟಿಟಿಸಿ ಸಂಸ್ಥೆಯು ಉನ್ನತ ತಂತ್ರಜ್ಞಾನ ಮತ್ತು ಸೌಕರ್ಯಗಳನ್ನು ಅಳವಡಿಸಿಕೊಂಡಿದ್ದು, ಕೈಗಾರಿಕೆಗಳಲ್ಲಿ ಅನುಭವ ಹೊಂದಿದ ತಂತ್ರಜ್ಞರಿಂದ ವಿದ್ಯಾರ್ಥಿಗಳಿಗೆ ತರಬೇತಿ ನೀಡುತ್ತದೆ. ತರಬೇತಿ ಪಡೆಯುವ ಅಭ್ಯರ್ಥಿಗಳಿಗೆ ಕ್ಯಾಂಪಸ್ ಸಂದರ್ಶನದ ಮೂಲಕ ಪ್ರತಿಷ್ಠಿತ ಕೈಗಾರಿಕೆಗಳಲ್ಲಿ ಉದ್ಯೋಗ ಅವಕಾಶ ಕಲ್ಪಿಸಲಾಗುವುದು. ಆಸಕ್ತ ಅಭ್ಯರ್ಥಿಗಳು ಜುಲೈ 26ರೊಳಗೆ ಜಿಟಿಟಿಸಿ, ಕೈಗಾರಿಕಾ ವಸಾಹತು, ಗೋಕುಲ ರಸ್ತೆ, ಹುಬ್ಬಳ್ಳಿ ಇಲ್ಲಿಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗಾಗಿ 81828 60552, 0836– 2333159 ಸಂಪರ್ಕಿಸಬಹುದು ಎಂದು ಕಾಲೇಜಿನ ಪ್ರಾಂಶುಪಾಲರಾದ ಮಾರುತಿ ಭಜಂತ್ರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.