ADVERTISEMENT

ರಾಜ್ಯ ಸರ್ಕಾರದ ದಿವಾಳಿತನ ಸಾಬೀತು: ಪ್ರಲ್ಹಾದ ಜೋಶಿ

​ಪ್ರಜಾವಾಣಿ ವಾರ್ತೆ
Published 31 ಆಗಸ್ಟ್ 2025, 23:30 IST
Last Updated 31 ಆಗಸ್ಟ್ 2025, 23:30 IST
<div class="paragraphs"><p>ಪ್ರಲ್ಹಾದ ಜೋಶಿ</p></div>

ಪ್ರಲ್ಹಾದ ಜೋಶಿ

   

ಹುಬ್ಬಳ್ಳಿ: ‘ರಾಜ್ಯ ಸರ್ಕಾರ ದಿವಾಳಿ ಆಗಿದೆ ಎಂದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕೋಪ ಬರುತ್ತದೆ. ಈಗ ಎರಡನೇ ಬಾರಿ ಸ್ಥಿರಾಸ್ತಿ ನೋಂದಣಿ ಶುಲ್ಕ ಹೆಚ್ಚಿಸಿ, ದಿವಾಳಿತನ ಸಾಬೀತುಪಡಿಸಿದ್ದಾರೆ’ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಟೀಕಿಸಿದರು.

ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಸಾಮಾನ್ಯರು ಖರೀದಿಸುವ ಚಿಕ್ಕ ಮನೆ, ಅಪಾರ್ಟ್‌ಮೆಂಟ್‌ಗಳ ಮೇಲೆ ಶುಲ್ಕ ಹೆಚ್ಚಳವು ಪರಿಣಾಮ ಬೀರುತ್ತದೆ’ ಎಂದರು.

ADVERTISEMENT

‘ಜಿಎಸ್‌ಟಿ ನಿರ್ಧಾರವು ರಾಜ್ಯ ಸರ್ಕಾರದ ಕೈಯಲ್ಲಿ ಇಲ್ಲ ಎಂದು ರಾಜ್ಯದ ಜನರು ಸಮಾಧಾನ ಪಟ್ಟುಕೊಳ್ಳುವ ಸ್ಥಿತಿ ಬಂದಿದೆ’ ಎಂದು ಅವರು ವ್ಯಂಗ್ಯವಾಡಿದರು.

ಬೇರೆ ಧರ್ಮದವರು ಎಷ್ಟು ಮಕ್ಕಳನ್ನು ಮಾಡಿದರೂ ತೊಂದರೆ ಇಲ್ಲ. ಹಿಂದೂಗಳು ಮೂರು ಮಕ್ಕಳನ್ನು ಹೊಂದುವಂತೆ ಆರ್‌ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಕರೆ ನೀಡಿದರೆ ಕಾಂಗ್ರೆಸ್‌ನವರಿಗೆ ನೋವಾಗುತ್ತದೆ.
- ಪ್ರಲ್ಹಾದ ಜೋಶಿ, ಕೇಂದ್ರ ಸಚಿವ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.