ಧಾರವಾಡ: ‘ಮುಖ್ಯಮುಂತ್ರಿ ಸಿದ್ದರಾಮಯ್ಯ ಅವರು ತಮಗೆ ಬೇಕಾದಂತೆ ಮಾತನಾಡುತ್ತಾರೆ. ಅವರು ಓತಿಕ್ಯಾತ ಇದ್ದಂತೆ. ಬಣ್ಣ ಬದಲಿಸುತ್ತಾರೆ’ ಎಂದು ಕೇಂದ್ರ ಆಹಾರ ಸಚಿವ ಪ್ರಲ್ಹಾದ ಜೋಶಿ ಟೀಕಿಸಿದರು.
‘ಮುಖ್ಯಮಂತ್ರಿ ಬದಲಿಸುವುದು, ಬಿಡುವುದು ನಮಗೆ ಸಂಬಂಧಪಡದ ವಿಚಾರ. ಆದರೆ, ಕಾಂಗ್ರೆಸ್‌ನ ಆಂತರಿಕ ಜಗಳವನ್ನು ಮರೆಮಾಚಲು ಜಾತಿ ಸಮೀಕ್ಷೆ ತಂದು ಗೊಂದಲ ಮೂಡಿಸಿದ್ದು ಸರಿಯಲ್ಲ’ ಎಂದು ಅವರು ಗುರುವಾರ ಸುದ್ದಿಗಾರರಿಗೆ ತಿಳಿಸಿದರು.
‘ಸಿದ್ದರಾಮಯ್ಯ ಅವರು ಕಾಂಗ್ರೆಸ್ ಇತಿಹಾಸ ತಿಳಿದುಕೊಳ್ಳಬೇಕು. ಒಬಿಸಿ, ಎಸ್‌ಸಿ, ಎಸ್‌ಟಿ ಸಮುದಾಯಗಳ ಮೀಸಲಾತಿಗೆ ರಾಜೀವ ಗಾಂಧಿ ವಿರೋಧಿಸಿದ್ದರೇ? ಇಲ್ಲವೇ ಎಂಬುದನ್ನು ಸಿದ್ದರಾಮಯ್ಯ ತಿಳಿಸಬೇಕು’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.