ADVERTISEMENT

ಹಣ ನೀಡಿ ಸಿ.ಎಂ ಸ್ಥಾನ ಪಡೆಯುವ ವ್ಯವಸ್ಥೆ ಬಿಜೆಪಿಯಲ್ಲಿ ಇಲ್ಲ: ಪ್ರಲ್ಹಾದ ಜೋಶಿ

ಮುಖ್ಯಮಂತ್ರಿ ಬದಲಾವಣೆ ಇಲ್ಲ: ಪ್ರಲ್ಹಾದ ಜೋಶಿ ಹೇಳಿಕೆ

​ಪ್ರಜಾವಾಣಿ ವಾರ್ತೆ
Published 8 ಮೇ 2022, 2:28 IST
Last Updated 8 ಮೇ 2022, 2:28 IST
ಪ್ರಲ್ಹಾದ ಜೋಶಿ
ಪ್ರಲ್ಹಾದ ಜೋಶಿ   

ಹುಬ್ಬಳ್ಳಿ: ‘ಹಣ ನೀಡಿ ಮುಖ್ಯಮಂತ್ರಿ ಸ್ಥಾನ ಪಡೆಯುವ ಪದ್ಧತಿ ಕಾಂಗ್ರೆಸ್‌ನಲ್ಲಿದೆ. ಬಿಜೆಪಿಯಲ್ಲಿ ಈ ವ್ಯವಸ್ಥೆ ಇಲ್ಲ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದ್ದಾರೆ. ಹೀಗಾಗಿ, ಈ ವಿಚಾರದಲ್ಲಿ ವಿವಾದ ಮುಂದುವರಿಸುವುದು ಅನಗತ್ಯ’ ಎಂದು ‌ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹೇಳಿದರು.

ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಯಾರೋ ಮಧ್ಯವರ್ತಿಗಳುಭೇಟಿ ಮಾಡಿಸುತ್ತೇನೆ ಎಂದು ಹೇಳಿದ್ದರು. ಅದನ್ನು ನಾನು ನಿರಾಕರಿಸಿದ್ದೆ ಎಂದು ಯತ್ನಾಳ ಸ್ಪಷ್ಟಪಡಿಸಿದ್ದಾರೆ’ ಎಂದರು.

‘ಪಿಎಸ್‌ಐ ವಿಚಾರದಲ್ಲಿ ಯಾವುದೇ ತನಿಖಾ ಸಂಸ್ಥೆಯಿಂದ ತನಿಖೆ ಮಾಡುವುದು ಬೇಡ ಎಂದು ಕಾಂಗ್ರೆಸ್ ಮುಖಂಡರು ಹೇಳುತ್ತಿದ್ದಾರೆ. ಕಾಂಗ್ರೆಸ್‌ನ ಬ್ಲಾಕ್‌ ಸಮಿತಿ ಅಧ್ಯಕ್ಷ ಸೇರಿದಂತೆ ಹಲವರು ಶಾಮೀಲಾಗಿದ್ದಾರೆ. ಅವರನ್ನು ರಕ್ಷಣೆ ಮಾಡುವ ಉದ್ದೇಶದಿಂದ ನ್ಯಾಯಾಂಗ ತನಿಖೆಗೆ ಒತ್ತಾಯಿಸುತ್ತಿದ್ದಾರೆ. ನ್ಯಾಯಾಂಗ ತನಿಖೆ ಮಾಡಿದರೆ ಬಂಧನವಾಗುವುದಿಲ್ಲ. ಹೆಚ್ಚು ಸಮಯ ಆಗುತ್ತದೆ ಎನ್ನುವುದು ಕಾಂಗ್ರೆಸ್‌ನವರ ಲೆಕ್ಕಾಚಾರವಾಗಿದೆ’ ಎಂದರು.

ADVERTISEMENT

‘ಯತ್ನಾಳ ವಿರುದ್ಧ ಶೀಘ್ರ ಕ್ರಮ’ (ಶಿವಮೊಗ್ಗ ವರದಿ): ‘ಮುಖ್ಯಮಂತ್ರಿ ಸ್ಥಾನಕ್ಕೆ ₹ 2,500 ಕೋಟಿ ನೀಡುವಂತೆ ಕೇಂದ್ರದ ನಾಯಕರೇ ಕೇಳಿದ್ದರು ಎಂಬ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರ ಹೇಳಿಕೆ ಪಕ್ಷಕ್ಕೆ ಮುಜುಗರ ತಂದಿದೆ. ಹೇಳಿಕೆಯನ್ನು ರಾಜ್ಯ, ರಾಷ್ಟ್ರೀಯ ನಾಯಕರು ಗಂಭೀರವಾಗಿ ತೆಗೆದುಕೊಂಡಿದ್ದಾರೆ. ಪಕ್ಷದ ಹೈಕಮಾಂಡ್‌ ಯತ್ನಾಳ್‌ ವಿರುದ್ಧ ಸೂಕ್ತ ಕ್ರಮ ತೆಗೆದುಕೊಳ್ಳಲಿದೆ’ ಎಂದು ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.