ADVERTISEMENT

ಪ್ರಜಾವಾಣಿ–ರಸಪ್ರಶ್ನೆ ಚಾಂಪಿಯನ್‌ ಶಿಪ್‌: ಉತ್ಸಾಹದಿಂದ ಪಾಲ್ಗೊಂಡ ವಿದ್ಯಾರ್ಥಿಗಳು

​ಪ್ರಜಾವಾಣಿ ವಾರ್ತೆ
Published 10 ಡಿಸೆಂಬರ್ 2025, 4:35 IST
Last Updated 10 ಡಿಸೆಂಬರ್ 2025, 4:35 IST
   

ಹುಬ್ಬಳ್ಳಿ: ಇಲ್ಲಿನ ದೇಶಪಾಂಡೆನಗರದ ಸವಾಯಿ ಗಂಧರ್ವ ಸಭಾಂಗಣದಲ್ಲಿ ಬುಧವಾರ ಆಯೋಜಿಸಿರುವ ‘ಪ್ರಜಾವಾಣಿ–ರಸಪ್ರಶ್ನೆ ಚಾಂಪಿಯನ್‌ ಶಿಪ್‌’ ಸ್ಪರ್ಧೆಯಲ್ಲಿ ಪಾಲ್ಗೊಳ್ಳಲು ವಿವಿಧ ಶಾಲೆಗಳ ವಿದ್ಯಾರ್ಥಿಗಳು ಖುಷಿಯಿಂದ ಆಗಮಿಸಿದರು.

ಹುಬ್ಬಳ್ಳಿ–ಧಾರವಾಡ ಸೇರಿದಂತೆ ಗದಗ, ಹಾವೇರಿ, ಬೆಳಗಾವಿ, ಉತ್ತರ ಕನ್ನಡ, ಕೊಪ್ಪಳ, ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಗಳ 7 ರಿಂದ 10ನೇ ತರಗತಿಯ ವಿದ್ಯಾರ್ಥಿಗಳು ಸ್ಪರ್ಧೆಯಲ್ಲಿ ಪಾಲ್ಗೊಂಡು, ತಮ್ಮ ಪ್ರತಿಭೆ ಪ್ರದರ್ಶಿಸಲು ಉತ್ಸುಕರಾಗಿದ್ದರು. ಸ್ಪರ್ಧೆಯಲ್ಲಿ ಗೆಲ್ಲಲೇಬೇಕು ಎಂಬ ವಿಶ್ವಾಸ ಎಲ್ಲರಲ್ಲಿತ್ತು.

ತಮ್ಮ ಶಾಲೆಗಳ ಸಮವಸ್ತ್ರ ಧರಿಸಿ, ತಂಡದೊಂದಿಗೆ ಕುಳಿತು ವಿವಿಧ ವಿಷಯಗಳ ಕುರಿತು ಚರ್ಚಿಸಿದರು. ವಿಷಯಾಧಾರಿತ ಹಾಗೂ ಸಾಮಾನ್ಯ ಜ್ಞಾನದ ಪುಸ್ತಕಗಳನ್ನು ಹಿಡಿದು, ತಯಾರಿ ನಡೆಸಿದರು. ವಿದ್ಯಾರ್ಥಿಗಳೊಂದಿಗೆ ಬಂದಿದ್ದ ಶಿಕ್ಷಕರು ಹಾಗೂ ಪೋಷಕರು ಉತ್ಸಾಹ ತುಂಬಿದರು. ತಯಾರಿಗೆ ನೆರವಾದರು.

ADVERTISEMENT

ಸ್ಪರ್ಧೆಗೆ ಎಲ್ಲರಿಗೂ ಉಚಿತ ಪ್ರವೇಶ ಅವಕಾಶ ಕಲ್ಪಿಸಲಾಗಿದ್ದು, ಸ್ಪರ್ಧೆ ನಡೆಯುವ ಸ್ಥಳದಲ್ಲೂ ಕೆಲವರು ಹೆಸರು ನೋಂದಾಯಿಸಿಕೊಂಡರು. ಪ್ರಾಥಮಿಕ ಹಂತದ ಪರೀಕ್ಷೆ ನಡೆಸಿ, ನಂತರ ಮುಖ್ಯಸ್ಪರ್ಧೆಗೆ ಆಯ್ಕೆ ಮಾಡಿಕೊಳ್ಳಲಾಗುತ್ತದೆ.

ಇಲ್ಲಿ ವಿಜೇತರಾದವರು ಬೆಂಗಳೂರಿನಲ್ಲಿ ನಡೆಯುವ ರಾಜ್ಯಮಟ್ಟದ ಸ್ಪರ್ಧೆಯಲ್ಲಿ ಪಾಲ್ಗೊಳ್ಳುತ್ತಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.