
ಹುಬ್ಬಳ್ಳಿ: ಇಲ್ಲಿನ ದೇಶಪಾಂಡೆನಗರದ ಸವಾಯಿ ಗಂಧರ್ವ ಸಭಾಂಗಣದಲ್ಲಿ ಬುಧವಾರ ಆಯೋಜಿಸಿರುವ ಹುಬ್ಬಳ್ಳಿ ವಲಯದ ‘ಪ್ರಜಾವಾಣಿ–ರಸಪ್ರಶ್ನೆ ಚಾಂಪಿಯನ್ ಶಿಪ್'ನ ಪ್ರಾಥಮಿಕ ಹಂತದ ಪರೀಕ್ಷೆಯಲ್ಲಿ ಪಾಲ್ಗೊಂಡಿದ್ದ ವಿದ್ಯಾರ್ಥಿಗಳು ಉತ್ಸುಕತೆಯಿಂದ ಉತ್ತರ ಬರೆದರು.
ಪ್ರತಿ ಶಾಲೆಯಿಂದ ಇಬ್ಬರು ವಿದ್ಯಾರ್ಥಿಗಳನ್ನು ಒಳಗೊಂಡ ತಂಡ ರಚಿಸಲಾಗಿತ್ತು. ಕ್ವಿಜ್ ಮಾಸ್ಟರ್ ಮೇಘವಿ ಮಂಜುನಾಥ ಅವರು ಕೇಳಿದ ಪ್ರಶ್ನೆಗಳಿಗೆ, ಪರಸ್ಪರ ಚರ್ಚಿಸಿ, ಲಿಖಿತವಾಗಿ ಉತ್ತರಿಸಿದರು. ಉತ್ತರ ತಿಳಿದಾಗ ಲಗುಬಗೆಯಿಂದ, ಗೊಂದಲ ಉಂಟುಮಾಡಿದ ಪ್ರಶ್ನೆಗಳಿಗೆ ಯೋಚಿಸಿ ಉತ್ತರ ಬರೆದರು.
ಉಡುಪಿ ಜಿಲ್ಲೆ ಬ್ರಹ್ಮಾವರದ ಲಿಟ್ಲ್ ರಾಕ್ ಇಂಡಿಯನ್ ಸ್ಕೂಲ್ ನ ಎರಡು ತಂಡಗಳು, ಧಾರವಾಡದ ಸರ್ಕಾರಿ ಆದರ್ಶ ವಿದ್ಯಾಲಯ, ಹುಬ್ಬಳ್ಳಿಯ ಚಿನ್ಮಯ ವಿದ್ಯಾಲಯ, ಉತ್ತರ ಕನ್ನಡ ಜಿಲ್ಲೆ ಕುಮಟಾದ ಸಿವಿಎಸ್ ಕೆ ಪ್ರೌಢಶಾಲೆ, ಉತ್ತರ ಕನ್ನಡದ ಪಿಎಂಶ್ರೀ ಶಾಲೆಯ ತಂಡಗಳು ಎರಡನೇ ಹಂತದ ಸ್ಪರ್ಧೆಗೆ ಆಯ್ಕೆಯಾದವು. ಒಟ್ಟು ಐದು ಸುತ್ತುಗಳಲ್ಲಿ ಎರಡನೇ ಹಂತದ ಸ್ಪರ್ಧೆ ರೂಪಿಸಲಾಗಿದೆ.
ಇತರೆ ವಿದ್ಯಾರ್ಥಿಗಳಿಗೆ ಕೆಲವೊಂದು ಪ್ರಶ್ನೆಗಳನ್ನು ಕೇಳಿ, ಸರಿಯಾದ ಉತ್ತರ ನೀಡಿದವರಿಗೆ ಬಹುಮಾನ ನೀಡಲಾಯಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.