ADVERTISEMENT

ಧಾರವಾಡ | ಪ್ರಜ್ವಲ್ ಪ್ರಕರಣದ ತೀರ್ಪು ಒಪ್ಪಲೇಬೇಕು: ಸಚಿವ ಪ್ರಲ್ಹಾದ ಜೋಶಿ

​ಪ್ರಜಾವಾಣಿ ವಾರ್ತೆ
Published 2 ಆಗಸ್ಟ್ 2025, 18:36 IST
Last Updated 2 ಆಗಸ್ಟ್ 2025, 18:36 IST
ಪ್ರಲ್ಹಾದ ಜೋಶಿ
ಪ್ರಲ್ಹಾದ ಜೋಶಿ   

ಧಾರವಾಡ: ‘ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ ಅವರಿಗೆ ಅತ್ಯಾಚಾರ ಪ್ರಕರಣದಲ್ಲಿ ಜನಪ್ರತಿನಿಧಿಗಳ ವಿಶೇಷ (ಸೆಷನ್ಸ್) ನ್ಯಾಯಾಲಯವು ನೀಡಿದ ಜೀವಾವಧಿ ಕಾರಾಗೃಹ ವಾಸದ ತೀರ್ಪು ಒಪ್ಪಲೇಬೇಕು’ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹೇಳಿದರು.

‘ತಪ್ಪು ಮಾಡಿದವರು ಯಾರೇ ಆದರೂ, ಶಿಕ್ಷೆ ಅನುಭವಿಸಲೇಬೇಕು. ತನಿಖೆಯಲ್ಲಿ ಆರೋಪ ಸಾಬೀತಾದಲ್ಲಿ ಶಿಕ್ಷೆ ಆಗುತ್ತದೆ. ಅದರ ತೀರ್ಪು ಒಪ್ಪಬೇಕು. ಮುಂದಿನ ಆಯ್ಕೆ ಅವರಿಗೆ ಬಿಟ್ಟದ್ದು. ತೀರ್ಪಿನ ಬಗ್ಗೆ ನಾನು ಏನೂ ಹೇಳುವುದಿಲ್ಲ. ನ್ಯಾಯಾಲಯ ಕೂಲಂಕುಷವಾಗಿ ವಿಚಾರಣೆ ಮಾಡಿ ತೀರ್ಪು ನೀಡಿದೆ’ ಎಂದು ಅವರು ಸುದ್ದಿಗಾರರಿಗೆ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT