
ಪ್ರಜಾವಾಣಿ ವಾರ್ತೆ
ಧಾರವಾಡ: ‘ನವದೆಹಲಿಯಲ್ಲಿ ನಡೆದ ಎ.ಐ ಶೃಂಗಸಭೆಯ ‘ಎಕ್ಸ್ ಪೋ’ ದಲ್ಲಿ ಕಾಂಗ್ರೆಸ್ ಯುವ ಕಾರ್ಯಕರ್ತರು ಮಾಡಿದ ಗಲಾಟೆಯಿಂದ ದೇಶ ತಲೆ ತಗ್ಗಿಸುವಂತಾಗಿದ್ದು, ಈ ಬಗ್ಗೆ ಕಾಂಗ್ರೆಸ್ ನಾಯಕರು ಕ್ಷಮೆ ಕೇಳಬೇಕು’ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಆಗ್ರಹಿಸಿದರು.
ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ರಾಹುಲ್ ಗಾಂಧಿ ಮಾರ್ಗದರ್ಶನದಲ್ಲಿ ಕಾಂಗ್ರೆಸ್ ಗೂಂಡಾ ವರ್ತನೆ ಮಾಡುತ್ತಿದೆ. ರಾಹುಲ್ ಗಾಂಧಿ, ಸೋನಿಯಾ ಗಾಂಧಿ, ಪ್ರಿಯಾಂಕಾ ವಾದ್ರಾ ಮತ್ತು ಮಲ್ಲಿಕಾರ್ಜುನ ಖರ್ಗೆ ಅವರು ಈ ಬಗ್ಗೆ ಕ್ಷಮೆ ಕೇಳಬೇಕು‘ ಎಂದು ಒತ್ತಾಯಿಸಿದರು.
‘ನಮ್ಮ ದೇಶದ ಬಗ್ಗೆ ಕಳಕಳಿ ಇದ್ದರೆ, ದೇಶದ ಘನತೆ ಬಗ್ಗೆ ಯೋಚನೆ ಇದ್ದಿದ್ದರೆ ಇಷ್ಟೊಂದು ಕಟುವಾಗಿ ಟೀಕೆ ಮಾಡುತ್ತಿರಲಿಲ್ಲ. ಇವರು ದೇಶಕ್ಕೆ ಅಪಮಾನ ಮಾಡಿದ್ದಾರೆ’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.