
ಪ್ರಲ್ಹಾದ ಜೋಶಿ
ಹುಬ್ಬಳ್ಳಿ: ‘ನಗರದ ಮಂಟೂರು ರಸ್ತೆಯಲ್ಲಿ ಈಚೆಗೆ ನಡೆದ ಮನೆಗಳ ಹಂಚಿಕೆ, ಫಲಾನುಭವಿಗಳಿಗೆ ಹಕ್ಕುಪತ್ರ ವಿತರಣಾ ಕಾರ್ಯಕ್ರಮಕ್ಕೆ ಕೇಂದ್ರ ವಸತಿ ಮತ್ತು ನಗರ ವ್ಯವಹಾರ ಸಚಿವ ಮನೋಹರ್ ಲಾಲ್ ಖಟ್ಟರ್ ಅವರನ್ನು ಆಹ್ವಾನಿಸಬೇಕಿತ್ತು’ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹೇಳಿದರು.
ನಗರದಲ್ಲಿ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ನಗರ ಸೇರಿದಂತೆ ರಾಜ್ಯದ ಕೆಲವೆಡೆ ಪ್ರಧಾನಮಂತ್ರಿ ಆವಾಸ್ ಯೋಜನೆಯಡಿ (ಪಿಎಂಎವೈ) ಮನೆಗಳನ್ನು ನಿರ್ಮಿಸಲಾಗಿದೆ. ಹೀಗಾಗಿ ಕೇಂದ್ರದ ಸಂಬಂಧಿಸಿದ ಸಚಿವರನ್ನೇ ಆಹ್ವಾನಿಸಬೇಕಿತ್ತು’ ಎಂದರು.
‘ಮನೆಗಳ ನಿರ್ಮಾಣಕ್ಕೆ ಸಂಬಂಧಿಸಿದಂತೆ ಕೇಂದ್ರ ನೀಡಿದ ಸಬ್ಸಿಡಿ ಹಣಕ್ಕೆ ಶೇ 18ರಷ್ಟು ಜಿಎಸ್‌ಟಿ ಹಾಕಲಾಗಿದೆ ಎನ್ನುವುದು ಸುಳ್ಳು. ಶೇ 5ರಷ್ಟು ಮಾತ್ರ ಜಿಎಸ್‌ಟಿ ಇರುತ್ತದೆ. ಇದು ಸಹ ರಾಜ್ಯ ಸರ್ಕಾರಕ್ಕೆ ಮರಳಿ ಬರುತ್ತದೆ’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.