ಹುಬ್ಬಳ್ಳಿ: ಅಫ್ಗಾನಿಸ್ತಾನದಲ್ಲಿರುವ ಭಾರತೀಯ ನಿವಾಸಿಗಳೊಂದಿಗೆ ಕೇಂದ್ರ ಸರ್ಕಾರ ಸಂಪರ್ಕದಲ್ಲಿದ್ದು, ಅವರ ರಕ್ಷಣೆಗೆ ಅಗತ್ಯ ಕ್ರಮಕೈಗೊಳ್ಳಲಾಗುತ್ತಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹೇಳಿದರು.
ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಫ್ಗಾನಿಸ್ತಾನದ ಪರಿಸ್ಥಿತಿ ತುಂಬಾ ಹದಗೆಟ್ಟಿದೆ. ಭಾರತೀಯರ ಜೀವ ರಕ್ಷಣೆ ನಿಟ್ಟಿನಲ್ಲಿ ಅಧಿಕಾರಿಗಳು ಈಗಾಗಲೇ ಕಾರ್ಯ ಪ್ರವೃತ್ತರಾಗಿದ್ದಾರೆ ಎಂದರು.
ಅಲ್ಲಿಯ ಜನರ ಜೀವನ ಕಾಪಾಡುವುದು ಅವಶ್ಯವಾಗಿದೆ. ಅಮೆರಿಕ ಸರ್ಕಾರ ಅಲ್ಲಿನ ಜನರ ರಕ್ಷಣೆಗೆ ಮುಂದಾಗಬೇಕು ಎಂದು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.