ADVERTISEMENT

ಯಡಿಯೂರಪ್ಪ, ಶೆಟ್ಟರ್ ಅನುಭವ ಪಕ್ಷ ಬಳಸಿಕೊಳ್ಳಲಿದೆ: ಪ್ರಲ್ಹಾದ ಜೋಶಿ

​ಪ್ರಜಾವಾಣಿ ವಾರ್ತೆ
Published 3 ಸೆಪ್ಟೆಂಬರ್ 2021, 8:21 IST
Last Updated 3 ಸೆಪ್ಟೆಂಬರ್ 2021, 8:21 IST
ಹು-ಧಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಮತ ಚಲಾಯಿಸಿದ ಕೇಂದ್ರ ಸಚಿವ ಪ್ರಲ್ಹಾದ ಜೋಶಿ
ಹು-ಧಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಮತ ಚಲಾಯಿಸಿದ ಕೇಂದ್ರ ಸಚಿವ ಪ್ರಲ್ಹಾದ ಜೋಶಿ   

ಹುಬ್ಬಳ್ಳಿ: ಹಿರಿಯರಾದ ಬಿ.ಎಸ್. ಯಡಿಯೂರಪ್ಪ ಹಾಗೂ ಜಗದೀಶ ಶೆಟ್ಟರ್ ಅವರ ರಾಜಕೀಯ ಅನುಭವವನ್ನು‌ ಮುಂಬರುವ ದಿನಗಳಲ್ಲಿ ಪಕ್ಷ ಸಮರ್ಪಕವಾಗಿ ಬಳಸಿಕೊಳ್ಳಲಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹೇಳಿದರು.

ಮಹಾನಗರ ಪಾಲಿಕೆ ಚುನಾವಣೆಗೆ ಕುಟುಂಬ ಸಮೇತ ಬಂದು ಮತ ಚಲಾಯಿಸಿ ಮಾಧ್ಯಮದವರ ಜೊತೆ ‌ಮಾತನಾಡಿದ ಅವರು ಪಕ್ಷದಲ್ಲಿ ಯಾವ ಹಿರಿಯರನ್ನೂ ಕಡೆಗಣಿಸಿಲ್ಲ. ಕೋವಿಡ್ ಕಾರಣಕ್ಕೆ ಕೋರ್ ಕಮಿಟಿ ಸಭೆ ನಡೆದಿಲ್ಲ. ಮುಂದಿನ ದಿನಗಳಲ್ಲಿ ಸಭೆ ನಡೆಸಿ ಹಿರಿಯರ ಸಲಹೆ ಪಡೆದೇ ತೀರ್ಮಾನ ಕೈಗೊಳ್ಳಲಾಗುವುದು ಎಂದರು.

ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿಯಾಗಿ ಒಂದು ತಿಂಗಳಲ್ಲಿ ಉತ್ತಮ ಆಡಳಿತ ನೀಡಿದ್ದಾರೆ. ಮುಖ್ಯಮಂತ್ರಿಯಾಗಿ ಯಾರು ಇರುತ್ತಾರೊ‌ ಅವರ ನೇತೃತ್ವದಲ್ಲಿಯೇ ಮುಂದಿನ‌ ಚುನಾವಣೆ ಎದುರಿಸುವುದು ಸಾಮಾನ್ಯ. ಅಮಿತ್ ಶಾ ಅವರು ಇದೇ ಮಾತು ಹೇಳಿದ್ದಾರೆ. ಇದರಲ್ಲಿ ‌ವಿಶೇಷವೇನೂ ಇಲ್ಲ ಎಂದರು.

ADVERTISEMENT

ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಗೊಂದಲವಾದ ಬಗ್ಗೆ ಪೂರ್ಣ ಮಾಹಿತಿ ಇಲ್ಲ. ಈ ಬಗ್ಗೆ ಜಿಲ್ಲಾಧಿಕಾರಿಯಿಂದ ಮಾಹಿತಿ ಪಡೆಯಲಾಗುವುದು ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.