
ಪ್ರಜಾವಾಣಿ ವಾರ್ತೆ
ಹುಬ್ಬಳ್ಳಿ: ‘ಬಾಗಲಕೋಟೆಯ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧ ಉಳಿದವರನ್ನು ಶೀಘ್ರ ಬಂಧಿಸಲು ಆಗ್ರಹಿಸಿ ಫೆ.26ರಂದು ಹುಬ್ಬಳ್ಳಿ, ಬಾಗಲಕೋಟೆಯಲ್ಲಿ ಪ್ರತಿಭಟನೆ ನಡೆಸಲಾಗುವುದು’ ಎಂದು ಶ್ರೀರಾಮಸೇನೆ ಸಂಘಟನೆಯ ಸಂಸ್ಥಾಪಕ ಅಧ್ಯಕ್ಷ ಪ್ರಮೋದ ಮುತಾಲಿಕ್ ಇಲ್ಲಿ ತಿಳಿಸಿದರು.
‘ಕಾಂಗ್ರೆಸ್ ತುಷ್ಟೀಕರಣ ನೀತಿಯಿಂದ ಕೆಲ ಮುಸ್ಲಿಮರು ಮೆರೆದಾಡುತ್ತಿದ್ದಾರೆ. ಇಂಥ ಬೆಳವಣಿಗೆಗೆ ರಾಜ್ಯ ಸರ್ಕಾರ ಕಡಿವಾಣ ಹಾಕಬೇಕು’ ಎಂದು ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಒತ್ತಾಯಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.