ADVERTISEMENT

ಪ್ರಶಾಂತ ಭೂಷಣ್‌ಗೆ ಮಹಾಸಂಗ್ರಾಮಿ ಎಸ್‌.ಆರ್‌.ಹಿರೇಮಠ ಸಮಾಜ ಪರಿವರ್ತನ ಪುರಸ್ಕಾರ

​ಪ್ರಜಾವಾಣಿ ವಾರ್ತೆ
Published 20 ಡಿಸೆಂಬರ್ 2025, 11:49 IST
Last Updated 20 ಡಿಸೆಂಬರ್ 2025, 11:49 IST
<div class="paragraphs"><p>ಪ್ರಶಾಂತ ಭೂಷಣ್‌</p></div>

ಪ್ರಶಾಂತ ಭೂಷಣ್‌

   

ಧಾರವಾಡ: ನಗರದ ಕರ್ನಾಟಕ ವಿದ್ಯಾವರ್ಧಕ ಸಂಘವು ಸಮಾಜ ಪರಿವರ್ತನಾ ಸಮುದಾಯದ ದತ್ತಿಯಡಿ ನೀಡುವ ‘ಮಹಾಸಂಗ್ರಾಮಿ ಎಸ್‌.ಆರ್‌.ಹಿರೇಮಠ ಸಮಾಜ ಪರಿವರ್ತನ ಪುರಸ್ಕಾರ’ಕ್ಕೆ ಸುಪ್ರೀಂ ಕೋರ್ಟ್ ವಕೀಲ ಪ್ರಶಾಂತ ಭೂಷಣ್‌ ಅವರನ್ನು ಆಯ್ಕೆ ಮಾಡಲಾಗಿದೆ.

ಪ್ರಶಸ್ತಿಯು ₹ 1 ಲಕ್ಷ ನಗದು, ಸ್ಮರಣಿಕೆ ಒಳಗೊಂಡಿದೆ. ಡಿ.23ರಂದು ಪಾಟೀಲ ಪುಟ್ಟಪ್ಪ ಸಭಾಭವನದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ. ನಿವೃತ್ತ ನ್ಯಾಯಮೂರ್ತಿ ಸಂತೋಷ ಹೆಗ್ಡೆ ಅವರು ಪ್ರಶಸ್ತಿ ಪ್ರದಾನ ಮಾಡುವರು ಎಂದು ಪ್ರಕಟಣೆ ತಿಳಿಸಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.