ADVERTISEMENT

ಹುಬ್ಬಳ್ಳಿ | ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

​ಪ್ರಜಾವಾಣಿ ವಾರ್ತೆ
Published 24 ಜುಲೈ 2025, 20:17 IST
Last Updated 24 ಜುಲೈ 2025, 20:17 IST
   

ಹುಬ್ಬಳ್ಳಿ: ಕರ್ನಾಟಕ ರಾಜ್ಯ ವೀರಶೈವ ಲಿಂಗಾಯತ ಪಂಚಮಸಾಲಿ ಸಂಘ, ಧಾರವಾಡ ಜಿಲ್ಲಾ ಘಟಕದ ವತಿಯಿಂದ ಪ್ರತಿಭಾ ಪುರಸ್ಕಾರ ನೀಡಲಾಗುತ್ತಿದ್ದು, ಧಾರವಾಡ ಜಿಲ್ಲೆಯಲ್ಲಿ 2025ರಲ್ಲಿ ಎಸ್ಎಸ್ಎಲ್‌ಸಿ, ಪಿಯುಸಿ ಪರೀಕ್ಷೆಯಲ್ಲಿ, ಶೇ 90ಕ್ಕಿಂತ ಅಧಿಕ ಅಂಕ ಗಳಿಸಿದ ಪಂಚಮಸಾಲಿ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತರು ಆ.10ರೊಳಗಾಗಿ ತಮ್ಮ ಆಧಾರ್ ಕಾರ್ಡ್, ಅಂಕಪಟ್ಟಿ, ಹಾಗೂ ಜಾತಿ ಪ್ರಮಾಣ ಪತ್ರಗಳ ಝೆರಾಕ್ಸ್ ಪ್ರತಿಗಳನ್ನು, ಡಾ.ಎಂ.ಎಂ.ನುಚ್ಚಿ, ಮನೆ ನಂಬರ್ 22, ಅಭಿನವ ನಗರ ಆನಂದ ನಗರ ರಸ್ತೆ, ಹಳೆ ಹುಬ್ಬಳ್ಳಿ, 580024 –ಈ ವಿಳಾಸಕ್ಕೆ ಕಳುಹಿಸಬೇಕು. 

ಹೆಚ್ಚು ಅಂಕ ಗಳಿಸಿದ ಪ್ರತಿ ತಾಲ್ಲೂಕಿನ ಇಬ್ಬರು ವಿದ್ಯಾರ್ಥಿಗಳನ್ನು ಪುರಸ್ಕಾರಕ್ಕೆ ಆಯ್ಕೆ ಮಾಡಲಾಗುವುದು. ಮಾಹಿತಿಗೆ ಮೊ.ಸಂ: 9482401739 /8050458109 ಸಂಪರ್ಕಿಸಬಹುದು ಎಂದು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಿ.ಜಿ.ದ್ಯಾವನಗೌಡ್ರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.