ಧಾರವಾಡ: ‘ಲೋಕಾಯುಕ್ತ ಸಂಸ್ಥೆಗೆ ಸರ್ಕಾರಿ ಅಧಿಕಾರಿಗಳ ಮತ್ತು ನೌಕರರ ಆಸ್ತಿ ವಿವರ ಲಭ್ಯವಾಗುವಂತ ವ್ಯವಸ್ಥೆ ರೂಪಿಸಬೇಕು. ಪ್ರತಿವರ್ಷ ಆಸ್ತಿ ವಿವರವನ್ನು ಪೋರ್ಟಲ್‌ನಲ್ಲಿ ಅಪ್‌ಲೋಡ್ ಮಾಡಬೇಕು’ ಎಂದು ಕರ್ನಾಟಕ ರಾಷ್ಟ್ರ ಸಮಿತಿ (ಕೆಆರ್‌ಎಸ್) ಪಕ್ಷದ ರಾಜ್ಯ ಘಟಕದ ಸಂಘಟನಾ ಕಾರ್ಯದರ್ಶಿ ಚಂದ್ರಶೇಖರ ಮಠದ ಒತ್ತಾಯಿಸಿದರು.
ನಗರದಲ್ಲಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸರ್ಕಾರಿ ಅಧಿಕಾರಿಗಳು ಮತ್ತು ನೌಕರರು ಪ್ರತಿ ವರ್ಷ ಆಸ್ತಿ ವಿವರವನ್ನು ಸರ್ಕಾರಕ್ಕೆ ಸಲ್ಲಿಸಬೇಕು ಎಂಬ ನಿಯಮ ಇದೆ. ಅಧಿಕಾರಿಗಳು, ನೌಕರರ ಆಸ್ತಿ ವಿವರ ಲೋಕಾಯುಕ್ತ ಸಂಸ್ಥೆಗೆ ಪೋರ್ಟಲ್‌ನಲ್ಲಿ ಲಭ್ಯವಾಗುವಂತೆ ವ್ಯವಸ್ಥೆ ಮಾಡಬೇಕು ಎಂದು ಲೋಕಾಯುಕ್ತರು ಸರ್ಕಾರಕ್ಕೆ ಪತ್ರ ಬರೆದಿದ್ದಾರೆ. ಈ ನಿಟ್ಟಿನಲ್ಲಿ ಸರ್ಕಾರ ಕ್ರಮ ವಹಿಸಬೇಕು’ ಎಂದು ಒತ್ತಾಯಿಸಿದರು.
‘ಮದ್ರಾಸ್ ಹೈಕೋರ್ಟ್ ನ್ಯಾಯಮೂರ್ತಿ ಸಿ.ವಿ.ಕಾರ್ತಿಕೇಯನ್ ಅವರು ಸರ್ಕಾರಿ ನೌಕರರ ಆಸ್ತಿ ವಿವರ ಸಾರ್ವಜನಿಕ ಮಾಹಿತಿ ಎಂದು ತೀರ್ಪು ನೀಡಿದ್ದಾರೆ. ಸರ್ಕಾರಿ ಉದ್ಯೋಗಿಗಳ ಆಸ್ತಿ ವಿವರ ಲೋಕಾಯುಕ್ತ ಸಂಸ್ಥೆಗೆ ಲಭ್ಯವಾಗುವಂತೆ ವ್ಯವಸ್ಥೆಯನ್ನು ರೂಪಿಸಿ ಮಾರ್ಚ್ ಅಂತ್ಯದೊಳಗೆ ವಿವರ ಅಪಲೋಡ್ ಮಾಡಬೇಕು. ಈ ನಿಟ್ಟಿನಲ್ಲಿ ಸರ್ಕಾರ ಕ್ರಮ ವಹಿಸದಿದ್ದರೆ ಹೋರಾಟ ಹಮ್ಮಿಕೊಳ್ಳಲಾಗುವುದು’ ಎಂದು ಎಚ್ಚರಿಸಿದರು.
ಕೆಆರ್‌ಎಸ್ ಪಕ್ಷದ ಜಿಲ್ಲಾ ಘಟಕದ ಅಧ್ಯಕ್ಷ ಮಲ್ಲಿಕಾರ್ಜುನ, ಅಬ್ದುಲ್ ರೆಹಮಾನ್ ಮುನ್ಶಿ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.