ADVERTISEMENT

ಸ್ವ ಉದ್ಯೋಗಕ್ಕೆ ಆದ್ಯತೆ ನೀಡಿ: ಪ್ರಲ್ಹಾದ ಜೋಶಿ

​ಪ್ರಜಾವಾಣಿ ವಾರ್ತೆ
Published 11 ಏಪ್ರಿಲ್ 2022, 5:48 IST
Last Updated 11 ಏಪ್ರಿಲ್ 2022, 5:48 IST
ಹುಬ್ಬಳ್ಳಿಯ ಗಾಮನಗಟ್ಟಿ ಕೈಗಾರಿ ಕ ಪ್ರದೇಶದಲ್ಲಿ ಗಾಯಿತ್ರಿ ಇಂಡಸ್ಟ್ರಿಯ ಸಿದ್ಧ ಆಹಾರ ಉತ್ಪನ್ನಗಳ ಮಾದರಿಯನ್ನು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಪ್ರದರ್ಶಿಸಿದರು. ಇಂಡಸ್ಟ್ರಿಯ ಮಾಲೀಕ ಜಯತೀರ್ಥ ಕಟ್ಟಿ, ಶಾಸಕ ಅರವಿಂದ ಬೆಲ್ಲದ, ಆರ್‌ಎಸ್‌ಎಸ್‌ನ ಉತ್ತರ ಕರ್ನಾಟಕದ ಸಹ ಸಂಚಾಲಕ ಅರವಿಂದರಾವ್ ದೇಶಪಾಂಡೆ, ಶಾಸಕ ಶಂಕರಪಾಟೀಲ ಮುನೇನಕೊಪ್ಪ ಇದ್ದಾರೆ

ಹುಬ್ಬಳ್ಳಿ: ‘ಕಂಪನಿಗಳಲ್ಲಿ ಕೆಲಸ ಮಾಡಿದರಷ್ಟೇ ಕೆಲಸ ಎಂದು ಭಾವಿಸಬಾರದು. ಸ್ವ ಉದ್ಯೋಗ ಸೃಷ್ಟಿಯಲ್ಲಿ ತೊಡಗಿಸಿಕೊಳ್ಳಬೇಕು’ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಸಲಹೆ ನೀಡಿದರು.

ಇಲ್ಲಿನ ಗಾಮನಗಟ್ಟಿ ಕೈಗಾರಿಕಾ ಪ್ರದೇಶದಲ್ಲಿ ಸಿದ್ಧ ಆಹಾರ ಉತ್ಪಾದನೆಯ ಗಾಯಿತ್ರಿ ಇಂಡಸ್ಟ್ರಿ ಕಾರ್ಖಾನೆ ಉದ್ಘಾಟನೆ ಮಾಡಿ ಮಾತನಾಡಿದ ಅವರು, ‘ಸ್ವ ಉದ್ಯೋಗ ಸೃಷ್ಟಿ ಮಾಡುವುದಕ್ಕೆ ಬಹಳಷ್ಟು ಜನ ಹಿಂದೇಟು ಹಾಕುತ್ತಾರೆ. ಹಾಗಾಗಿ, ಸರ್ಕಾರ ಸ್ವ ಉದ್ಯೋಗಕ್ಕಾಗಿ ಹಲವು ಯೋಜನೆಗಳನ್ನು ರೂಪಿಸಿದೆ’ ಎಂದರು.

‘ಗಾಯಿತ್ರಿ ಇಂಡಸ್ಟ್ರಿಯಿಂದ ಸಿರಿಧಾನ್ಯದ ಐದು ಮಾದರಿಯ ಸಿದ್ಧ ಆಹಾರಗಳನ್ನು ಮಾರುಕಟ್ಟೆಗೆ ಪರಿಚಯಿಸಲಾಗಿದ್ದು, ಇದನ್ನು ಸೇವಿಸುವುದರಿಂದ ರಕ್ತದ ಒತ್ತಡ ಹಾಗೂ ಮಧುಮೇಹದಂತಹ ಸಮಸ್ಯೆಗಳು ತಪ್ಪಲಿವೆ. ಆಹಾರ ಪದ್ಧತಿ ಬದಲಾವಣೆಯಿಂದ ಅನಾರೋಗ್ಯ ಸಮಸ್ಯೆ ಹೆಚ್ಚಾಗುತ್ತಿದೆ’ ಎಂದು ಹೇಳಿದರು.

ADVERTISEMENT

ಅಭಿನವ ರೇವಣ ಸಿದ್ದೇಶ್ವರ ಸ್ವಾಮೀಜಿ ಮಾತನಾಡಿ, ‘ಭಾರತ ಸಂಪದ್ಭರಿತ ದೇಶವಾಗಿದ್ದು, ಸಾವಯವ ಪದ್ಧತಿಯನ್ನು ಹಲವು ವರ್ಷಗಳಿಂದ ಪಾಲಿಸಿಕೊಂಡು ಬಂದಿದೆ. ಹಿತ ಮತ್ತು ಮಿತವಾದ ಆಹಾರವನ್ನು ಸೇವನೆ ಮಾಡುವುದರಿಂದ ಆರೋಗ್ಯ ಉತ್ತಮವಾಗಿರುತ್ತದೆ’ ಎಂದರು.

ಗಾಯಿತ್ರಿ ಇಂಡಸ್ಟ್ರಿಯ ಮಾಲೀಕ ಜಯತೀರ್ಥ ಕಟ್ಟಿ ಮಾತನಾಡಿದರು. ಸಂಸ್ಕರಿತ ಆಹಾರಗಳ ಕೇಂದ್ರದ ನಿರ್ದೇಶಕ ಚೇತನ ಹಂಚಾಟೆ, ಪ್ರಸನ್ನ ಕಟ್ಟಿ, ಅನಂತಾಚಾರ್ಯ ಕಟ್ಟಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.