ADVERTISEMENT

ಧಾರವಾಡ: ‘ರಸ್ತೆ, ಶೌಚಾಲಯ ನಿರ್ಮಾಣಕ್ಕೆ ಆದ್ಯತೆ’: ತಹಶೀಲ್ದಾರ್ ಸೂಚನೆ

​ಪ್ರಜಾವಾಣಿ ವಾರ್ತೆ
Published 25 ಜನವರಿ 2023, 7:47 IST
Last Updated 25 ಜನವರಿ 2023, 7:47 IST
ಅಣ್ಣಿಗೇರಿ ತಾಲ್ಲೂಕು ಇಬ್ರಾಹಿಂಪೂರ ಗ್ರಾಮದಲ್ಲಿ ಹಮ್ಮಿಕೊಂಡ ಜಿಲ್ಲಾಧಿಕಾರಿ ನಡೆ ಹಳ್ಳಿ ಕಡೆ ಕಾರ್ಯಕ್ರಮವನ್ನು ತಹಶೀಲ್ದಾರ್‌ ಭ್ರಮರಾಂಬ ಉದ್ಘಾಟಿಸಿದರು
ಅಣ್ಣಿಗೇರಿ ತಾಲ್ಲೂಕು ಇಬ್ರಾಹಿಂಪೂರ ಗ್ರಾಮದಲ್ಲಿ ಹಮ್ಮಿಕೊಂಡ ಜಿಲ್ಲಾಧಿಕಾರಿ ನಡೆ ಹಳ್ಳಿ ಕಡೆ ಕಾರ್ಯಕ್ರಮವನ್ನು ತಹಶೀಲ್ದಾರ್‌ ಭ್ರಮರಾಂಬ ಉದ್ಘಾಟಿಸಿದರು   

ಅಣ್ಣಿಗೇರಿ: ತಾಲ್ಲೂಕಿನ ಇಬ್ರಾಹಿಂಪೂರ ಗ್ರಾಮದಲ್ಲಿ ಜಿಲ್ಲಾಧಿಕಾರಿ ನಡೆ ಹಳ್ಳಿ ಕಡೆ ಕಾರ್ಯಕ್ರಮ ಈಚೆಗೆ ನಡೆಯಿತು. ತಹಶೀಲ್ದಾರ್‌ ಭ್ರಮರಾಂಬ ಗುಬ್ಬಿಶಟ್ಟಿ ಉದ್ಘಾಟಿಸಿದರು.

ಗ್ರಾಮದಲ್ಲಿ ಈಗಾಗಲೇ ಸಾಕಷ್ಟು ಅಭಿವೃದ್ದಿ ಕಾರ್ಯಗಳು ನಡೆದಿವೆ. ರಸ್ತೆ,
ಚರಂಡಿ ಹಾಗೂ ಶೌಚಾಲಯ ನಿರ್ಮಾಣಕ್ಕೆ ಆದ್ಯತೆ ನೀಡುವಂತೆ ಅಧಿಕಾರಿಗಳಿಗೆ ತಹಶೀಲ್ದಾರ್‌ ತಿಳಿಸಿದರು.

ಬಸ್ ಸೌಕರ್ಯ ಸಮಸ್ಯೆಗೆ ಸಂಬಂಧಿಸಿ ಆದಷ್ಟು ಬೇಗ ಪರಿಹಾರ ಕಂಡುಕೊಂಡು ಸಾರ್ವಜನಿಕರಿಗೆ ಅನುಕೂಲ ಮಾಡಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ADVERTISEMENT

ಕಂದಾಯ ಇಲಾಖೆಗೆ ಸಂಬಂಧಿಸಿದ 15 ಅರ್ಜಿಗಳು, ಮಾಸಾಶನಕ್ಕೆ ಸಂಬಂಧಿ
ಸಿದ 10 ಹಾಗೂ ಗ್ರಾಮ ಪಂಚಾಯ್ತಿಗೆ ಸಂಬಂಧಿಸಿಗೆ 25 ಅರ್ಜಿಗಳು ಸೇರಿದಂತೆ ಸಾರ್ವಜನಿಕರಿಂದ 50ಕ್ಕೂ ಹೆಚ್ಚು ಅರ್ಜಿಗಳು ಬಂದವು.

ಸಂಜೀವಕುಮಾರ ಗುಡಿಮನಿ, ಅರುಣ ಕರಿಶಂಕರಿ, ಎಂ.ಎಸ್.ಪಾಟೀಲ, ಕೆ.ಎಸ್.ಪಾಟೀಲ ಸೇರಿದಂತೆ ತಾಲ್ಲೂಕು ಮಟ್ಟದ ಎಲ್ಲ ಇಲಾಖೆ ಅಧಿಕಾರಿಗಳು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.