ADVERTISEMENT

ಮೂಲಸೌಕರ್ಯ ಅಭಿವೃದ್ಧಿಗೆ ಒತ್ತು: ಸಂಜೀವ್ ಕಿಶೋರ್

​ಪ್ರಜಾವಾಣಿ ವಾರ್ತೆ
Published 1 ಏಪ್ರಿಲ್ 2022, 15:22 IST
Last Updated 1 ಏಪ್ರಿಲ್ 2022, 15:22 IST
ನೈರುತ್ಯ ರೈಲ್ವೆಯ ಹುಬ್ಬಳ್ಳಿ, ಬೆಂಗಳೂರು, ಮೈಸೂರು ವಿಭಾಗಗಳ ಪ್ರಧಾನ ಮುಖ್ಯಸ್ಥರು ಹಾಗೂ ವಿಭಾಗೀಯ ರೈಲ್ವೆ ವ್ಯವಸ್ಥಾಪಕರೊಂದಿಗೆ ಪ್ರಧಾನ ವ್ಯವಸ್ಥಾಪಕ ಸಂಜೀವ್ ಕಿಶೋರ್ ಅವರು ಹುಬ್ಬಳ್ಳಿಯಲ್ಲಿ ಶುಕ್ರವಾರ ಸಭೆ ನಡೆಸಿದರು
ನೈರುತ್ಯ ರೈಲ್ವೆಯ ಹುಬ್ಬಳ್ಳಿ, ಬೆಂಗಳೂರು, ಮೈಸೂರು ವಿಭಾಗಗಳ ಪ್ರಧಾನ ಮುಖ್ಯಸ್ಥರು ಹಾಗೂ ವಿಭಾಗೀಯ ರೈಲ್ವೆ ವ್ಯವಸ್ಥಾಪಕರೊಂದಿಗೆ ಪ್ರಧಾನ ವ್ಯವಸ್ಥಾಪಕ ಸಂಜೀವ್ ಕಿಶೋರ್ ಅವರು ಹುಬ್ಬಳ್ಳಿಯಲ್ಲಿ ಶುಕ್ರವಾರ ಸಭೆ ನಡೆಸಿದರು   

ಹುಬ್ಬಳ್ಳಿ: ‘ನೈರುತ್ಯ ರೈಲ್ವೆಯು ಮೂಲಸೌಕರ್ಯ ಅಭಿವೃದ್ಧಿಗೆ ವಿಶೇಷ ಒತ್ತು ನೀಡಿದೆ. 2021-22ರ ಅವಧಿಯಲ್ಲಿ 187 ಕಿ.ಮೀ. ದ್ವಿಪಥಿಕರಣ, 22 ಕಿ.ಮೀ. ಹೊಸ ಮಾರ್ಗಗಳು ಹಾಗೂ 511.7 ಕಿ.ಮೀ. ವಿದ್ಯುದ್ದೀಕರಣ ಪೂರ್ಣಗೊಳಿಸಲಾಗಿದೆ’ ಎಂದು ನೈರುತ್ಯ ರೈಲ್ವೆಯ ಪ್ರಧಾನ ವ್ಯವಸ್ಥಾಪಕ ಸಂಜೀವ್ ಕಿಶೋರ್ ಹೇಳಿದರು.

ನಗರದಲ್ಲಿ ಶುಕ್ರವಾರ ಇಲಾಖೆಯ ಹುಬ್ಬಳ್ಳಿ, ಬೆಂಗಳೂರು, ಮೈಸೂರು ವಿಭಾಗಗಳ ಪ್ರಧಾನ ಮುಖ್ಯಸ್ಥರು ಹಾಗೂ ವಿಭಾಗೀಯ ರೈಲ್ವೆ ವ್ಯವಸ್ಥಾಪಕರೊಂದಿಗೆ ನಡೆದ ಸಭೆಯಲ್ಲಿ ಮಾತನಾಡಿದ ಅವರು, ‘ನಿವ್ವಳ ಶೂನ್ಯ ಇಂಗಾಲದ ಹೊರಸೂಸುವಿಕೆಯನ್ನು ಸಾಧಿಸುವ ನಿಟ್ಟಿನಲ್ಲಿ, 2021-22ನೇ ಹಣಕಾಸು ವರ್ಷದಲ್ಲಿ 26 ರೈಲುಗಳ ಸಂಚಾರವನ್ನು ಎಲೆಕ್ಟ್ರಿಕ್ ಟ್ರಾಕ್ಷನ್‌ಗೆ ಪರಿವರ್ತಿಸಲಾಗಿದೆ’ ಎಂದರು.

‘ಡೀಸೆಲ್ ಬಳಕೆ ತಗ್ಗಿಸುವುದಕ್ಕಾಗಿ 40 ರೈಲುಗಳು ಎಚ್ಒಜಿ ಪವರ್ ಕಾರ್‌ಗಳಲ್ಲಿ ಸಂಚರಿಸುತ್ತಿವೆ. ಹಸಿರು ಅಭಿಯಾನದ ಉಪಕ್ರಮವಾಗಿ, ವಿವಿಧ ಜಾತಿಯ70 ಸಾವಿರ ಸಸಿಗಳನ್ನು ನೆಡಲಾಗಿದೆ. ಸರಕು ಸಾಗಾಟ, ಗುಜರಿ ವಸ್ತುಗಳ ಮಾರಾಟ ಸೇರಿದಂತೆ ವಿವಿಧ ಮೂಲಗಳಿಂದ ಬರುವ ಆದಾಯವು ಏರಿಕೆಯಾಗಿದೆ’ ಎಂದು ತಿಳಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.