ADVERTISEMENT

ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಆದ್ಯತೆ: ಅಬ್ಬಯ್ಯ

​ಪ್ರಜಾವಾಣಿ ವಾರ್ತೆ
Published 11 ಜನವರಿ 2022, 14:59 IST
Last Updated 11 ಜನವರಿ 2022, 14:59 IST
ಹುಬ್ಬಳ್ಳಿಯ ಬಿಡನಾಳದ ಆರ್.ಕೆ. ಪಾಟೀಲ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಮಂಗಳವಾರ ಹೊಸ ಕೊಠಡಿಗಳನ್ನು ಶಾಸಕ ಪ್ರಸಾದ ಅಬ್ಬಯ್ಯ ಉದ್ಘಾಟಿಸಿದರು
ಹುಬ್ಬಳ್ಳಿಯ ಬಿಡನಾಳದ ಆರ್.ಕೆ. ಪಾಟೀಲ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಮಂಗಳವಾರ ಹೊಸ ಕೊಠಡಿಗಳನ್ನು ಶಾಸಕ ಪ್ರಸಾದ ಅಬ್ಬಯ್ಯ ಉದ್ಘಾಟಿಸಿದರು   

ಹುಬ್ಬಳ್ಳಿ: ಸರ್ಕಾರಿ ಶಾಲೆಯ ಮಕ್ಕಳು ಕೂಡ ಇತರೆ ಶಾಲೆಗಳ ಮಕ್ಕಳಿಗೆ ಸರಿಸಮಾನವಾಗಿ ಎಲ್ಲ ರಂಗದಲ್ಲೂ ಪ್ರಗತಿ ಸಾಧಿಸಬೇಕು ಎನ್ನುವ ಉದ್ದೇಶದಿಂದ ಕ್ಷೇತ್ರ ವ್ಯಾಪ್ತಿಯ ಎಲ್ಲ ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ವಿಶೇಷ ಒತ್ತು ನೀಡಲಾಗುತ್ತಿದೆ ಎಂದು ಶಾಸಕ ಪ್ರಸಾದ ಅಬ್ಬಯ್ಯ ತಿಳಿಸಿದರು.

ಇಲ್ಲಿನ ಬಿಡನಾಳದ ಆರ್.ಕೆ. ಪಾಟೀಲ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ₹30 ಲಕ್ಷ ಅನುದಾನದಲ್ಲಿ ನಿರ್ಮಿಸಿರುವ ಎರಡು ಹೊಸ ಶಾಲಾ ಕೊಠಡಿಗಳನ್ನು ಉದ್ಘಾಟಿಸಿ ಮಾತನಾಡಿದ ಅವರು ‘ಶಿಕ್ಷಣದಿಂದ ಮಾತ್ರ ಸಮಾಜದ ಅಭಿವೃದ್ಧಿ ಸಾಧ್ಯವಿದ್ದು, ಈ ನಿಟ್ಟಿನಲ್ಲಿ ಕ್ಷೇತ್ರ ವ್ಯಾಪ್ತಿಯ ಎಲ್ಲ ಸರ್ಕಾರಿ ಶಾಲೆಗಳಿಗೆ ಸ್ಮಾರ್ಟ್‌ ಬೋರ್ಡ್‌, ಡೆಸ್ಕ್, ಗ್ರಿಲ್, ಶೌಚಾಲಯ, ಪೇವರ್ಸ್, ಕುಡಿಯುವ ನೀರಿನ ಸೌಲಭ್ಯ, ಹೆಚ್ಚುವರಿ ಕೊಠಡಿ ಸೇರಿದಂತೆ ಮೂಲ ಸೌಕರ್ಯಗಳನ್ನು ಕಲ್ಪಿಸಲು ಒತ್ತು ಕೊಡಲಾಗಿದೆ’ ಎಂದರು.

ಕ್ಷೇತ್ರ ಶಿಕ್ಷಣಾಧಿಕಾರಿ ಶ್ರೀಶೈಲ ಕರಿಕಟ್ಟಿ, ಕ್ಷೇತ್ರ ಸಮನ್ವಯಾಧಿಕಾರಿ ಎಂ.ಎಸ್. ಶಿವಳ್ಳಿಮಠ, ಮೋಹನ ಅಸುಂಡಿ, ವಿಜನಗೌಡ ಪಾಟೀಲ, ಮುಖಂಡರಾದ ವೀರಭದ್ರಪ್ಪ ಮೇಟಿ, ಶರೀಫ ನದಾಫ್, ಹನುಮಂತಗೌಡ ಪಾಟೀಲ, ಬಸನಗೌಡ ಪಾಟೀಲ, ರುದ್ರಗೌಡ ಪಾಟೀಲ, ಗಂಗಾಧರ ಕಲ್ಲಣ್ಣವರ, ಶ್ರೀಧರ ಹೂಗಾರ, ದಿವಾನಸಾಬ್ ನದಾಫ್, ಬಾಗಣ್ಣ ಬಿರಾಜದಾರ್, ಅಲ್ತಾಫ್ ಮುಲ್ಲಾ, ಎಂ.ಎಚ್. ಜಂಗ್ಲಿ, ಶಾರದಾ ನವಲಗುಂದ, ಶೈಲಜಾ ಭದ್ರಾಪೂರ ಇದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.