ADVERTISEMENT

‘ಸಂಶೋಧನೆ ಜನಸಾಮಾನ್ಯರಿಗೆ ತಲುಪಲಿ’

​ಪ್ರಜಾವಾಣಿ ವಾರ್ತೆ
Published 3 ಜುಲೈ 2025, 16:03 IST
Last Updated 3 ಜುಲೈ 2025, 16:03 IST

ಧಾರವಾಡ: ‘ವಿಶ್ವವಿದ್ಯಾಲಯದಲ್ಲಿ ನಡೆಯುವ ಸಂಶೋಧನೆಗಳು ಸಾಮಾನ್ಯ ಜನರಿಗೂ ತಲುಪಬೇಕು ಎಂದು ಕ.ವಿ.ವಿ ನಿವೃತ್ತ ಕುಲಪತಿ ಕೆ.ಬಿ.ಗುಡಸಿ ಅಭಿಪ್ರಾಯಪಟ್ಟರು.

ಕರ್ನಾಟಕ ವಿದ್ಯಾವರ್ಧಕ ಸಂಘವು ಪ್ರೊ.ಶರಣಪ್ಪ ತೋಟಪ್ಪ ನಂದಿಬೇವೂರ ದತ್ತಿ ಅಂಗವಾಗಿ ಈಚೆಗೆ ಆಯೋಜಿಸಿದ್ದ ‘ಯುವ ವಿಜ್ಞಾನಿ ಪ್ರಶಸ್ತಿ’ ಪ್ರದಾನ ಸಮಾರಂಭದಲ್ಲಿ ಅವರು ಮಾತನಾಡಿದರು.

‘ಪ್ರೊ. ಎಸ್.ಟಿ. ನಂದಿಬೇವೂರ ಅವರು ರಸಾಯನಶಾಸ್ತ್ರದ ಪ್ರಾಧ್ಯಾಪಕರಾಗಿ 60 ಸಂಶೋಧನಾ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ಮಾಡಿದ್ದಾರೆ. ಸುಮಾರು 500ಕ್ಕೂ ಹೆಚ್ಚು ವೈಜ್ಞಾನಿಕ ಲೇಖನ ಬರೆದಿದ್ದಾರೆ’ ಎಂದು ತಿಳಿಸಿದರು.

ADVERTISEMENT

‘ಈ ಪ್ರಶಸ್ತಿ ಕೊಡುವ ಹಿನ್ನೆಲೆ ಹಾಗೂ ಉದ್ದೇಶವನ್ನು ಸಂಶೋಧನಾ ವಿದ್ಯಾರ್ಥಿಗಳು ಅರ್ಥ ಮಾಡಿಕೊಳ್ಳಬೇಕು. ಅದು ಭವಿಷ್ಯದ ನಿಮ್ಮ ಸಾಧನೆಗೆ ಸ್ಫೂರ್ತಿಯಾಗುತ್ತದೆ’ ಎಂದರು.

ಸಂಘದ ಉಪಾಧ್ಯಕ್ಷ ಡಾ.ಸಂಜೀವ ಕುಲಕರ್ಣಿ ಅಧ್ಯಕ್ಷತೆ ವಹಿಸಿದ್ದರು. ರವಿ ಕಾಂಬಳೆ, ಅರುಣಾ ನಂದಿಬೇವೂರ, ಎಸ್.ಟಿ.ನಂದಿಬೇವೂರು, ಶಂಕರ ಹಲಗತ್ತಿ, ವಿಶ್ವೇಶ್ವರಿ ಹಿರೇಮಠ, ಶೈಲಜಾ ಅಮರಶೆಟ್ಟಿ, ಶಿವಾನಂದ ಭಾವಿಕಟ್ಟಿ, ವೀರಣ್ಣಒಡ್ಡೀನ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.