ಧಾರವಾಡ: ‘ವಿದ್ಯಾರ್ಥಿಗಳು ಏಕಾಗ್ರತೆಯಿಂದ ಅಧ್ಯಯನ ಮಾಡಿದರೆ, ಪರಿಶ್ರಮ ಹಾಕಿದರೆ ಯಶಸ್ಸು ಗಳಿಸಲು ಸಾಧ್ಯ’ ಎಂದು ಡಾ. ಶ್ವೇತಾ ಸಂಕನೂರ ಹೇಳಿದರು.
ವೈ.ಬಿ. ಅಣ್ಣಿಗೇರಿ ವಿಜ್ಞಾನ ಮತ್ತು ವಾಣಿಜ್ಯ ಪದವಿಪೂರ್ವ ಕಾಲೇಜಿನಲ್ಲಿ ಈಚೆಗೆ ಆಯೋಜಿಸಿದ್ದ 2024-25ನೇ ಸಾಲಿನ ಪಠ್ಯ, ಪಠ್ಯೇತರ ಹಾಗೂ ಕ್ರೀಡಾ ಚಟುವಟಿಕೆಗಳ ಪ್ರತಿಭಾ ಪುರಸ್ಕಾರ ಮತ್ತು ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಸ್ವಾಗತ ಸಮಾರಂಭದಲ್ಲಿ ಅವರು ಮಾತನಾಡಿದರು.
‘ವಿದ್ಯಾರ್ಥಿಗಳು ಓದಿನತ್ತ ಹೆಚ್ಚು ಗಮನ ಕೊಡಬೇಕು. ಶಿಕ್ಷಕರು ಬೋಧಿಸುವ ವಿಷಯಗಳನ್ನು ಚೆನ್ನಾಗಿ ಮನದಟ್ಟು ಮಾಡಿಕೊಳ್ಳಬೇಕು. ಚೆನ್ನಾಗಿ ತಯಾರಿ ನಡೆಸಿ ಪರೀಕ್ಷೆಗಳನ್ನು ಎದುರಿಸಬೇಕು’ ಎಂದು ಸಲಹೆ ನೀಡಿದರು.
ವೈಶುದೀಪ ಫೌಂಡೇಷನ್ ಅಧ್ಯಕ್ಷೆ ಶಿವಲೀಲಾ ಕುಲಕರ್ಣಿ ಮಾತನಾಡಿ, ‘ವಿದ್ಯಾರ್ಥಿಗಳು ಪಠ್ಯ ಮತ್ತು ಪಠ್ಯೇತರ ಚಟುವಟಿಕೆಗಳಲ್ಲಿ ಭಾಗವಹಿಸಬೇಕು. ವಿವಿಧ ಕೌಶಲಗಳನ್ನು ಕಲಿತು ಉತ್ತಮ ಬದುಕು ಕಟ್ಟಿಕೊಳ್ಳಬೇಕು’ ಎಂದರು.
ಅಣ್ಣಿಗೇರಿ ಸೇವಾ ಟ್ರಸ್ಟ್ ಅಧ್ಯಕ್ಷ ಎನ್. ವೈ.ಅಣ್ಣಿಗೇರಿ ಅಧ್ಯಕ್ಷತೆ ವಹಿಸಿದ್ದರು. ಉಪಾಧ್ಯಕ್ಷ ಪ್ರಕಾಶ ಜವಳಿ, ಕಾರ್ಯದರ್ಶಿ ರೇಖಾ ಅಣ್ಣಿಗೇರಿ, ಪ್ರೊ. ಬಸವರಾಜ ಉಡಕೇರಿ, ಪ್ರಾಚಾರ್ಯ ಪ್ರೊ.ಮಹಾಬಳೇಶ್ವರಯ್ಯ, ಪ್ರೊ. ಸಚಿನ್ ಕಮತೆ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.