ಧಾರವಾಡ: ವಿದ್ಯಾರ್ಥಿಗಳನ್ನು ಉತ್ತಮ ನಾಗರಿಕರನ್ನಾಗಿ ರೂಪಿಸುವಲ್ಲಿ ಶಿಕ್ಷಕರ ಪಾತ್ರ ಮಹತ್ವದ್ದು ಎಂದು ಕರ್ನಾಟಕ ವಿಶ್ವವಿದ್ಯಾಲಯದ ಎನ್‍ಎಸ್‍ಎಸ್ ಸಂಯೋಜನಾಧಿಕಾರಿ ಎಂ.ಬಿ.ದಳಪತಿ ಅಭಿಪ್ರಾಯಪಟ್ಟರು.
ಕರ್ನಾಟಕ ಕಲಾ ಕಾಲೇಜಿನ(ಕೆಸಿಡಿ) ಫ್ಯಾರೇನ್ ಸಭಾಂಗಣದಲ್ಲಿ ಗುರುವಾರ ಆಯೋಜಿಸಿದ್ದ ಕಲಾ ಮತ್ತು ವಾಣಿಜ್ಯಶಾಸ್ತ್ರದ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ವಾರ್ಷಿಕ ಸ್ನೇಹ ಸಮ್ಮೇಳನದಲ್ಲಿ ಅವರು ಮಾತನಾಡಿದರು.
ಶೈಕ್ಷಣಿಕ ಹಾದಿಯಲ್ಲಿ ಪಿಯುಸಿ ಮಹತ್ವದ ಘಟ್ಟವಾಗಿದೆ. ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಪಿಯುಸಿ ಹಂತದಿಂದಲೇ ವಿದ್ಯಾರ್ಥಿಗಳು ಸಿದ್ದತೆ ನಡೆಸಬೇಕು. ಯೋಗ, ಧ್ಯಾನ, ವ್ಯಾಯಾಮಗಳನ್ನು ರೂಢಿಸಿಕೊಳ್ಳಬೆಕು ಎಂದು ಸಲಹೆ ನೀಡಿದರು.
ಆರ್‌ಟಿಒ ಅಧಿಕಾರಿ ಭಿಮನಗೌಡ ಪಾಟೀಲ ಮಾತನಾಡಿ, ರಸ್ತೆ ಸುರಕ್ಷತಾ ನಿಯಮ, ಸಂಚಾರ ನಿಯಮಗಳನ್ನು ಪಾಲಿಸಬೇಕು ಎಂದು ಹೇಳಿದರು.
ರಾಜ್ಯಶಾಸ್ತ್ರ ಉಪನ್ಯಾಸಕಿ ಸುಕನ್ಯಾ ಕಲ್ಲೂರ ಅವರನ್ನು ಸನ್ಮಾನಿಸಲಾಯಿತು. ಕರ್ನಾಟಕ ಕಲಾ ಕಾಲೇಜಿನ ಪ್ರಾಚಾರ್ಯ ಪ್ರೊ.ಡಿ.ಬಿ.ಕರಡೋಣಿ ಅಧ್ಯಕ್ಷತೆ ವಹಿಸಿದ್ದರು. ಪೂರ್ವ ವಲಯದ ಪ್ರಾದೇಶಿಕ ರಸ್ತೆ ಸಾರಿಗೆ ಅಧಿಕಾರಿ ಕೆ.ದಾಮೋದರ, ಪ್ರೊ.ಸುರೇಶ ಹುಲ್ಲನ್ನವರ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.