ADVERTISEMENT

ಸ್ಥಿರಾಸ್ತಿ ನೋಂದಣಿ ಶುಲ್ಕ ಹೆಚ್ಚಳ ಜನವಿರೋಧಿ: ಸುರೇಶ ಕಿರೇಸೂರ

​ಪ್ರಜಾವಾಣಿ ವಾರ್ತೆ
Published 1 ಸೆಪ್ಟೆಂಬರ್ 2025, 6:06 IST
Last Updated 1 ಸೆಪ್ಟೆಂಬರ್ 2025, 6:06 IST
ಸುರೇಶ ಕಿರೇಸೂರ
ಸುರೇಶ ಕಿರೇಸೂರ   

ಹುಬ್ಬಳ್ಳಿ: ಸ್ಥಿರಾಸ್ತಿ ನೋಂದಣಿ ಶುಲ್ಕ ಹೆಚ್ಚಳವು ರಾಜ್ಯ ಸರ್ಕಾರದ ಜನವಿರೋಧಿ ನೀತಿಯಾಗಿದೆ ಎಂದು ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಎಂಜಿನಿಯರ್‌ನ ಮಾಜಿ ಅಧ್ಯಕ್ಷ ಸುರೇಶ ಕಿರೇಸೂರ ಆರೋಪಿಸಿದ್ದಾರೆ‌.

‘ಈಗಾಗಲೇ ಬೆಲೆ ಏರಿಕೆಯಿಂದಾಗಿ ಜನರು ಸರ್ಕಾರಕ್ಕೆ ಛೀಮಾರಿ ಹಾಕುತ್ತಿದ್ದಾರೆ. ಸಾಲ ಮಾಡಿ ನಿವೇಶನ, ಹೊಲ, ಮನೆ ಖರೀದಿಸಿ ಬದುಕು ಕಟ್ಟಿಕೊಳ್ಳುತ್ತಿರುವವರು ಸರ್ಕಾರದ ಮೇಲೆ ಆಕ್ರೋಶಗೊಂಡಿದ್ದಾರೆ. ಕೂಡಲೇ ಶುಲ್ಕ ಹೆಚ್ಚಳವನ್ನು ಹಿಂಪಡೆಯಬೇಕು’ ಎಂದು ಅವರು ಪ್ರಕಟಣೆಯಲ್ಲಿ ಆಗ್ರಹಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT