ADVERTISEMENT

ಹೆಸರುಕಾಳು ಖರೀದಿಸುವ ಪ್ರಮಾಣ ಕಡಿತ: ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 22 ಸೆಪ್ಟೆಂಬರ್ 2018, 7:39 IST
Last Updated 22 ಸೆಪ್ಟೆಂಬರ್ 2018, 7:39 IST
 ಹೆಸರುಕಾಳು ಖರೀದಿಸುವ ಪ್ರಮಾಣವನ್ನು ಕಡಿತಗೊಳಿಸಿರುವುದನ್ನು ವಿರೋಧಿಸಿ ರೈತ ಸಂಘಟನೆಗಳು ಪ್ರತಿಭಟನೆ ನಡೆಸಿದರು
ಹೆಸರುಕಾಳು ಖರೀದಿಸುವ ಪ್ರಮಾಣವನ್ನು ಕಡಿತಗೊಳಿಸಿರುವುದನ್ನು ವಿರೋಧಿಸಿ ರೈತ ಸಂಘಟನೆಗಳು ಪ್ರತಿಭಟನೆ ನಡೆಸಿದರು   

ಹುಬ್ಬಳ್ಳಿ: ಬೆಂಬಲ ಬೆಲೆಯಲ್ಲಿ ಹೆಸರುಕಾಳು ಖರೀದಿಸುವ ಪ್ರಮಾಣವನ್ನು ಕಡಿತಗೊಳಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ವಿರೋಧಿಸಿ ಕರ್ನಾಟಕ ಪ್ರಾಂತ ರೈತ ಸಂಘ ಹಾಗೂ ಮಹದಾಯಿ ಕಳಸಾ ಬಂಡೂರಿ ಹೋರಾಟ ಸಮನ್ವಯ ಸಮಿತಿ ಪದಾಧಿಕಾರಿಗಳು ಇಲ್ಲಿನ ತಹಶೀಲ್ದಾರ್ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ಆರಂಭದಲ್ಲಿ ಪ್ರತಿ ರೈತರಿಂದ 10 ಕ್ವಿಂಟಲ್ ಖರೀದಿಸುವುದಾಗಿ ಘೋಷಿಸಿದ್ದ ಕೇಂದ್ರ ಸರ್ಕಾರ ಇದೀಗ ಪ್ರತಿ ರೈತರಿಂದ ಕೇವಲ 4 ಕ್ವಿಂಟಲ್ ಮಾತ್ರ ಖರೀದಿಸಲು ಮುಂದಾಗಿರುವುದಕ್ಕೆ ವಿರೋಧ ವ್ಯಕ್ತಪಡಿಸಿದರು.

ಪ್ರತಿ ರೈತರಿಂದ 15 ಕ್ವಿಂಟಲ್ ಖರೀದಿಸಬೇಕು ಮತ್ತು ಹೆಸರು ನೋಂದಾಯಿಸಿರುವ ಎಲ್ಲಾ ರೈತರ ಹೆಸರನ್ನು ಖರೀದಿಸಬೇಕು. ಖರೀದಿಸಿದ ಹೆಸರಿಗೆ ತಕ್ಷಣ ಹಣ ಪಾವತಿಸಬೇಕು ಎಂದು ಆಗ್ರಹಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.