ADVERTISEMENT

ಪೆಟ್ರೋಲ್, ಡೀಸೆಲ್ ದರ ಏರಿಕೆ ವಿರುದ್ಧ ಸಿಐಟಿಯು ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 24 ಜೂನ್ 2020, 10:50 IST
Last Updated 24 ಜೂನ್ 2020, 10:50 IST
ಪೆಟ್ರೋಲ್ ದರ ಏರಿಕೆ ವಿರುದ್ಧ ಹುಬ್ಬಳ್ಳಿಯಲ್ಲಿ ಪ್ರತಿಭಟನೆ
ಪೆಟ್ರೋಲ್ ದರ ಏರಿಕೆ ವಿರುದ್ಧ ಹುಬ್ಬಳ್ಳಿಯಲ್ಲಿ ಪ್ರತಿಭಟನೆ   

ಹುಬ್ಬಳ್ಳಿ: ಪೆಟ್ರೋಲ್ ಮತ್ತು ಡೀಸೆಲ್‌ ದರ ಏರಿಕೆ ಖಂಡಿಸಿ, ಸಿಐಟಿಯು ಸಂಘಟನೆ ವತಿಯಿಂದ ಹುಬ್ಬಳ್ಳಿಯ ಮಿನಿ ವಿಧಾನಸೌಧದ ಬಳಿ ಬುಧವಾರ ಪ್ರತಿಭಟನೆ ನಡೆಸಲಾಯಿತು.

ದಿನದಿಂದ ದಿನಕ್ಕೆ ಪೆಟ್ರೋಲ್ ಮತ್ತು ಡೀಸಲ್ ದರ ಏರಿಕೆ ಮಾಡುವುದರಿಂದ ಜನರು ಜೀವನ ನಡೆಸಲು ತುಂಬಾ ಕಷ್ಟಕರವಾಗಿದೆ ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.

ಸಿಐಟಿಯು ಸಂಘಟನೆಯ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದರಿಂದ ಹೆಚ್ಚಿನ ಪೊಲೀಸ್ ಭದ್ರತೆ ವಹಿಸಲಾಗಿತ್ತು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.