ADVERTISEMENT

ವೈದ್ಯಾಧಿಕಾರಿ ಮೇಲೆ ಹಲ್ಲೆ, ಲೈಂಗಿಕ ದೌರ್ಜನ್ಯ ಆರೋಪ ಖಂಡಿಸಿ‌ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 20 ಜೂನ್ 2020, 9:06 IST
Last Updated 20 ಜೂನ್ 2020, 9:06 IST
ಪ್ರತಿಭಟನಾಕಾರರು ಪಾಲಿಕೆ ಆಯುಕ್ತ ಡಾ. ಸುರೇಶ ಇಟ್ನಾಳ ಅವರಿಗೆ ಮನವಿ ಸಲ್ಲಿಸಿದರು.
ಪ್ರತಿಭಟನಾಕಾರರು ಪಾಲಿಕೆ ಆಯುಕ್ತ ಡಾ. ಸುರೇಶ ಇಟ್ನಾಳ ಅವರಿಗೆ ಮನವಿ ಸಲ್ಲಿಸಿದರು.   
""

ಹುಬ್ಬಳ್ಳಿ: ಮಹಾನಗರ ಪಾಲಿಕೆಯ ವೈದ್ಯಾಧಿಕಾರಿ ಡಾ. ಪ್ರಭು ಬಿರಾದಾರ ಅವರ ವಿರುದ್ಧ ಮಹಿಳೆಯೊಬ್ಬರು, ಲೈಂಗಿಕ ದೌರ್ಜನ್ಯದ ಸುಳ್ಳು ಆರೋಪ ಮಾಡಿ ಸಂಬಂಧಿಕರೊಂದಿಗೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ ಪಾಲಿಕೆಯ ಪೌರ ಕಾರ್ಮಿಕರ ಸಂಘ, ವೈದ್ಯಕೀಯ ಸಿಬ್ಬಂದಿ ಹಾಗೂ ವಿವಿಧ ದಲಿತ ಸಂಘಟನೆಗಳ ಸದಸ್ಯರು ಪಾಲಿಕೆ ಆವರಣದಲ್ಲಿ ಶನಿವಾರ ಪ್ರತಿಭಟನೆ ನಡೆಸಿದರು.

ವೈದ್ಯಾಧಿಕಾರಿ ಮೇಲಿನ ಆರೋಪದ ಬಗ್ಗೆ ಪಾರದರ್ಶಕವಾಗಿ ತನಿಖೆ ನಡೆಸಬೇಕು‌. ಕರ್ತವ್ಯದಲ್ಲಿದ್ದಾಗಲೇ ಅವರ ಮೇಲೆ ಹಲ್ಲೆ ನಡೆಸಿದವರ ವಿರುದ್ಧವೂ ಪ್ರಕರಣ ದಾಖಲಿಸಿ ಬಂಧಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

ಪಾಲಿಕೆ ಆಯುಕ್ತ ಡಾ. ಸುರೇಶ ಇಟ್ನಾಳ ಪ್ರತಿಭಟನಾಕಾರರಿಂದ ಮನವಿ ಸ್ವೀಕರಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.