ADVERTISEMENT

ನಿರ್ಮಲಾ ಸೀತಾರಾಮನ್‌ಗೆ ಏಕವಚನ ಬಳಕೆ: ಸಿದ್ದರಾಮಯ್ಯ ವಿರುದ್ಧ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 10 ಡಿಸೆಂಬರ್ 2025, 5:09 IST
Last Updated 10 ಡಿಸೆಂಬರ್ 2025, 5:09 IST
ಧಾರವಾಡದ ಜಿಲ್ಲಾಧಿಕಾರಿ ಕಚೇರಿ ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾದವರು ಮಂಗಳವಾರ ಪ್ರತಿಭಟನೆ ನಡೆಸಿದರು 
ಧಾರವಾಡದ ಜಿಲ್ಲಾಧಿಕಾರಿ ಕಚೇರಿ ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾದವರು ಮಂಗಳವಾರ ಪ್ರತಿಭಟನೆ ನಡೆಸಿದರು    

ಧಾರವಾಡ: ‘ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೇಂದ್ರ ಹಣಕಾಸು ಸಚಿವೆಗೆ ನಿರ್ಮಲಾ ಸೀತಾರಾಮನ್ ಅವರಿಗೆ ಏಕವಚನ ಬಳಸಿ ಮಾತನಾಡಿದ್ದು ಖಂಡನೀಯ. ಸಿದ್ದರಾಮಯ್ಯ ಅವರು ಕ್ಷಮೆಯಾಚಿಸಬೇಕು’ ಎಂದು ಬಿಜೆಪಿ ಮಹಿಳಾ ಮೋರ್ಚಾ ಜಿಲ್ಲಾ ಘಟಕದವರು ಮಂಗಳವಾರ ಪ್ರತಿಭಟನೆ ನಡೆಸಿದರು.

ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಸಮಾವೇಶಗೊಂಡ ಪ್ರತಿಭಟನಾಕಾರರು ಸಿದ್ದರಾಮಯ್ಯ ವಿರುದ್ಧ ಘೋಷಣೆ ಕೂಗಿದರು. ‘ಸಿದ್ದರಾಮಯ್ಯ ಅವರು ಏಕವಚನ ಬಳಸಿ ಮಾತಾಡಿರುವ ವಿಡಿಯೊ ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿದೆ. ಸಿದ್ದರಾಮಯ್ಯ ಅವರು ಕ್ಷಮೆಯಾಚಿಸದಿದ್ದರೆ ಉಗ್ರ ಹೋರಾಟ ಹಮ್ಮಿಕೊಳ್ಳುತ್ತೇವೆ’ ಎಂದು ಪ್ರತಿಭಟನಾಕಾರರು ಹೇಳಿದರು.

ಬಿಜೆಪಿ ಹು-ಧಾ ಮಹಾನಗರ ಜಿಲ್ಲಾ ಘಟಕದ ಅಧ್ಯಕ್ಷೆ ಸೀಮಾ ಲದ್ವಾ, ಸಮಿತಾ ಅಮರಶೆಟ್ಟಿ, ಮಾಲತಿ ಹುಲಿಕಟ್ಟಿ, ಶೋಭಾ ನಿಸ್ಸೀಮಗೌಡ, ರಾಜೇಶ್ವರಿ ಸಾಲಗತ್ತಿ ಇದ್ದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.