ADVERTISEMENT

ಧಾರವಾಡ: ಎಂಇಎಸ್ ದಬ್ಬಾಳಿಕೆ ಖಂಡಿಸಿ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 22 ಮಾರ್ಚ್ 2025, 16:07 IST
Last Updated 22 ಮಾರ್ಚ್ 2025, 16:07 IST
ಧಾರವಾಡದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು
ಧಾರವಾಡದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು   

ಧಾರವಾಡ: ಬೆಳಗಾವಿ ಬಸ್ ನಿರ್ವಾಹಕ ಮಹಾದೇವ ಹುಕ್ಕೇರಿ ಅವರ ಮೇಲೆ ಹಲ್ಲೆ ಹಾಗೂ ಎಂಇಎಸ್ ದಬ್ಬಾಳಿಕೆ ಖಂಡಿಸಿ ಎಚ್.ಶಿವರಾಮೇಗೌಡ ಬಣದ ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾ ಘಟಕದ ಪದಾಧಿಕಾರಿಗಳು ನಗರದಲ್ಲಿ ಶನಿವಾರ ಪ್ರತಿಭಟನೆ ನಡೆಸಿದರು.

ಕಡಪಾ ಮೈದಾನದಿಂದ ಪ್ರತಿಭಟನಾ ಮೆರವಣಿಗೆ ನಡೆಸಿದ ಪ್ರತಿಭಟನಾಕಾರರು ಜುಬಿಲಿ ವೃತ್ತದಲ್ಲಿ ಕೆಲ ಹೊತ್ತು ಪ್ರತಿಭಟನೆ ನಡೆಸಿ, ರಸ್ತೆ ತಡೆ ಮಾಡಿ ಕನ್ನಡದ ಬಾವುಟಗಳನ್ನು ಬೀಸಿ ಜೈಕಾರ ಕೂಗಿದರು. ಮಹಾರಾಷ್ಟ್ರ ಏಕೀಕರಣ ಸಮಿತಿ (ಎಂಇಎಸ್) ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ಘೋಷಣೆ ಕೂಗಿದರು.

ಪ್ರತಿಭಟನೆ ಹೊರತುಪಡಿಸಿ ಯಾವ ಪ್ರದೇಶದಲ್ಲಿಯೂ ಬಂದ್ ಲಕ್ಷಣಗಳು ಕಾಣಲಿಲ್ಲ. ಎಂದಿನಂತೆ ಮಾರುಕಟ್ಟೆಯಲ್ಲಿ ವ್ಯಾಪಾರ ವಹಿವಾಟು, ಬಸ್ ನಿಲ್ದಾಣಗಳಲ್ಲಿ ಬಸ್ಸುಗಳ ಸಂಚಾರವಿತ್ತು. ಇದರೊಂದಿಗೆ ಪ್ರಯಾಣಿಕರ ಸಂಖ್ಯೆಯಲ್ಲಿಯೂ ಎಂದಿನಂತೆ ಇತ್ತು.

ADVERTISEMENT

ಪರಮೇಶ್ವರ ಕಾಳೆ, ತುಳಜಪ್ಪ ಪೂಜಾರ, ಶಂಭುಗೌಡ ಸಾಲಿಮನಿ ಇದ್ದರು.

ಮುಂಜಾಗ್ರತಾ ಕ್ರಮವಾಗಿ ಪೊಲೀಸ್ ಇಲಾಖೆಯಿಂದ ಬಂದೋಬಸ್ತ್‌ ಮಾಡಲಾಗಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.