ADVERTISEMENT

ರಸ್ತೆ ಅಭಿವೃದ್ಧಿಗೆ ಆಗ್ರಹಿಸಿ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 28 ಏಪ್ರಿಲ್ 2022, 2:30 IST
Last Updated 28 ಏಪ್ರಿಲ್ 2022, 2:30 IST
ಹುಬ್ಬಳ್ಳಿಯ ಕೇಶ್ವಾಪುರ ಸೇಂಟ್ ಮೈಕಲ್ ಸ್ಕೂಲ್ ಬಳಿ ರಸ್ತೆ ಅಭಿವೃದ್ಧಿಪಡಿಸಬೇಕು ಎಂದು ಆಗ್ರಹಿಸಿ ಬುಧವಾರ ಕಾಂಗ್ರೆಸ್‌ ಕಾರ್ಯಕರ್ತರು ರಂಗೋಲಿ ಬಿಡಿಸಿ ಪ್ರತಿಭಟನೆ ಮಾಡಿದರು
ಹುಬ್ಬಳ್ಳಿಯ ಕೇಶ್ವಾಪುರ ಸೇಂಟ್ ಮೈಕಲ್ ಸ್ಕೂಲ್ ಬಳಿ ರಸ್ತೆ ಅಭಿವೃದ್ಧಿಪಡಿಸಬೇಕು ಎಂದು ಆಗ್ರಹಿಸಿ ಬುಧವಾರ ಕಾಂಗ್ರೆಸ್‌ ಕಾರ್ಯಕರ್ತರು ರಂಗೋಲಿ ಬಿಡಿಸಿ ಪ್ರತಿಭಟನೆ ಮಾಡಿದರು   

ಹುಬ್ಬಳ್ಳಿ: ಕೇಶ್ವಾಪುರದ ಸೇಂಟ್ ಮೈಕಲ್ ಸ್ಕೂಲ್ ಬಳಿ ರಸ್ತೆ ತೀರಾ ಹದಗೆಟ್ಟಿದ್ದು, ಸಾರ್ವಜನಿಕರ ಸಂಚಾರಕ್ಕೆ ತೊಂದರೆ
ಯಾಗುತ್ತಿದೆ. ಕೂಡಲೇ ಅಭಿವೃದ್ಧಿ ಪಡಿಸಬೇಕು ಎಂದು ಆಗ್ರಹಿಸಿ ಕಾಂಗ್ರೆಸ್‌ ಕಾರ್ಯಕರ್ತರು, ಬಧುವಾರ ರಸ್ತೆ ಮೇಲೆ ರಂಗೋಲಿ ಬಿಡಿಸಿ ಪ್ರತಿಭಟನೆ ಮಾಡಿದರು.

ಒಳಚರಂಡಿ ಕಾಮಗಾರಿ ಪೂರ್ಣಗೊಂಡು ವರ್ಷ ಕಳೆದಿದೆ. ರಸ್ತೆ ಅಭಿವೃದ್ಧಿ ಕಾಮಗಾರಿ ಕೈಗೆತ್ತಿಕೊಳ್ಳಬೇಕು ಎಂದು ಪಾಲಿಕೆ ಅಧಿಕಾರಿಗಳಿಗೆ ಹಾಗೂ ಶಾಸಕ ಜಗದೀಶ ಶೆಟ್ಟರ್ ಅವರಿಗೆ ಸಾಕಷ್ಟು ಬಾರಿ ಮನವಿ ಸಲ್ಲಿಸಲಾಗಿದೆ. ಅವರ ನಿರ್ಲಕ್ಷದಿಂದ ಸಾರ್ವಜನಿಕರು ಸಮಸ್ಯೆ ಅನುಭವಿಸುವಂತಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ರಸ್ತೆ ಅಭಿವೃದ್ಧಿ ಮಾಡುತ್ತಿಲ್ಲ. ಬ್ಯಾಂಕ್‌ಗಳು, ಹೋಟೆಲ್‌ಗಳು, ಶಾಲಾ–ಕಾಲೇಜುಗಳು ಈ ಪ್ರದೇಶದಲ್ಲಿದ್ದು, ಹದಗೆಟ್ಟ ರಸ್ತೆಯಿಂದ ಸಂಚಾರಕ್ಕೆ ತೊಂದರೆಯಾಗುತ್ತಿದೆ ಎಂದು ಹೇಳಿದರು.

ADVERTISEMENT

ವಿದ್ಯಾನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಜತ್ ಉಳ್ಳಾಗಡ್ಡಿಮಠ, ಸಂತೋಷ ಚಲವಾದಿ, ಹೂವಪ್ಪ ದಾಯಗೋಡಿ, ತೇಜರಾಜ್ ಜೈನ್, ಪ್ರೀತೇಶ ಪಾಲ್ಗೋಟ, ಸುರೇಶ, ಅಶೋಕ ನರಗುಂದ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.