ಧಾರವಾಡ: ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ನಡೆದ ಕಾಲ್ತುಳಿತ ಪ್ರಕರಣದ ನೈತಿಕ ಹೊಣೆ ಹೊತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಬಿಜೆಪಿ ಹುಬ್ಬಳ್ಳಿ-ಧಾರವಾಡ ಪಶ್ಚಿಮ ಹಾಗೂ ಗ್ರಾಮೀಣ ಘಟಕದವರು ಜುಬಿಲಿ ವೃತ್ತದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು.
‘ಸರ್ಕಾರದ ನಿರ್ಲಕ್ಷ್ಯದಿಂದ ವಿಜಯೋತ್ಸವ ಸಮಯದಲ್ಲಿ ದುರಂತ ಸಂಭವಿಸಿದೆ. ಕಾಲ್ತುಳಿತದಲ್ಲಿ 11 ಮಂದಿ ಸಾವಿಗೀಡಾಗಿದ್ದಾರೆ. ಮುಂಜಾಗ್ರತೆ ವಹಿಸದೆ ತರಾತುರಿಯಲ್ಲಿ ಕಾರ್ಯಕ್ರಮ ಆಯೋಜಿಸಿದ್ದೇ ದುರಂತಕ್ಕೆ ಕಾರಣ’ ಎಂದು ಪ್ರತಿಭಟನಕಾರರು ದೂರಿದರು.
`ರಾಜ್ಯ ಸರ್ಕಾರ ತನ್ನ ವೈಫಲ್ಯ ಮುಚ್ಚಿಹಾಕಲು ಪೊಲೀಸ್ ಅಧಿಕಾರಿಗಳನ್ನು ಅಮಾನತು ಮಾಡಿದೆ. ತಪ್ಪಿಸ್ಥರ ವಿರುದ್ಧ ರಾಜ್ಯಪಾಲರು ಕಾನೂನು ಕ್ರಮ ಕೈಗೊಳ್ಳಬೇಕು’ ಎಂದು ಒತ್ತಾಯಿಸಿದರು.
ಪಾಲಿಕೆ ಸದಸ್ಯರಾದ ಶಿವು ಹೀರೆಮಠ, ವಿಜಯಾನಂದ ಶಟ್ಟಿ, ಈರಣ್ಣ ಹಪಳಿ, ಶಂಕರ ಶೇಳಕೆ, ಮಂಜುನಾಥ ಗಾಮನಗಟ್ಟು, ಮೋಹನ ರಾಮದುರ್ಗ, ಅಮಿತ ಪಾಟೀಲ್, ಶ್ರೀನಿವಾಸ ಕೊಟ್ಯಾನ್, ರಾಕೇಶ ನಾಝರೆ, ಸುರೇಶ ಬೆದರೆ, ಸುನೀಲ್ ಮೋರೆ, ಬಸವರಾಜ ಬಾಳಗಿ, ರಮೇಶ ದೊಡ್ಡವಾಡ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.