ಧಾರವಾಡ: ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ (ಎಂಸ್‍ಪಿ)ಯನ್ನು ಕಾನೂನುಬದ್ಧಗೊಳಿಸಬೇಕು ಎಂಬುದು ಸಹಿತ ವಿವಿಧ ಬೇಡಿಕೆಗಳನ್ನು ಈಡೇಸುವಂತೆ ಅಖಿಲ ಭಾರತ ರೈತ ಕೃಷಿ ಕಾರ್ಮಿಕರ ಸಂಘಟನೆ ಧಾರವಾಡ ತಾಲ್ಲೂಕು ಸಮಿತಿಯುವರು ಹುಬ್ಬಳ್ಳಿ ತಾಲ್ಲೂಕಿನ ಭಂಡಿವಾಡದಲ್ಲಿ ಪ್ರತಿಭಟನೆ ನಡೆಸಿದರು.
ವಿದ್ಯುತ್ ಮಸೂದೆ 2023 ಕೈಬಿಡಬೇಕು. . ರೈತರ ಸಾಲ ಮನ್ನಾ ಮಾಡಬೇಕು. ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ (ನರೇಗಾ) ಕೂಲಿ ಕಾರ್ಮಿಕರಿಗೆ ವರ್ಷಪೂರ್ತಿ ಕೆಲಸಕೊಡಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು. .
ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗೆ ಮನವಿ ಪತ್ರ ಸಲ್ಲಿಸಿದರು. ಶರಣಬಸವ ಗೋನವಾರ ರಾಮಣ್ಣ ಗಾಣಗೇರ, ಶಿವಪ್ಪ, ನಿಂಗಪ್ಪ ಹಕ್ಕಿ,ಈರಣ್ಣ ಡಿಂಗಿ, ಹನುಮಂತ ಹುಲ್ಲೂರು, ಚನ್ನಪ್ಪ ಹುಲ್ಲೂರು, ಮಹಾದೇವಪ್ಪ ಹುಚ್ಚಣ್ಣನ್ನವರ ಪಾಲ್ಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.